ಗಾಂಜಾ ಬೆಳೆಯುತ್ತಿದ್ದ ತೋಟಕ್ಕೆ ಪೊಲೀಸ್ ದಾಳಿ

marijuvana
Share on facebook
Share on twitter
Share on linkedin
Share on whatsapp
Share on telegram
Share on email
Share on print

ಶಿಕಾರಿಪುರ(14-10-2020): ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದ ಆರೋಪಿಯ ತೋಟಕ್ಕೆ ದಾಳಿ ಮಾಡಿ, ಒಟ್ಟು 15 ಹಸಿ ಗಾಂಜಾ ಗಿಡಗಳ ವಶಪಡಿಸಿಕೊಂಡ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ವಿರುದ್ಧ NDPS ಕಾಯ್ದೆಯಡಿ  ಪ್ರಕರಣ ದಾಖಲು ಮಾಡಿದ್ದಾರೆ.

ಎ ಅಣ್ಣಾಪುರ ಗ್ರಾಮದ ನಿವಾಸಿ ಆರೋಪಿ ಪಾಲಾಕ್ಷಪ್ಪ ತನ್ನ ಜಮೀನಿನಲ್ಲಿ ಮಾದಕ ವಸ್ತು ಗಾಂಜಾ ಗಿಡಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಎ.ಎಸ್.ಪಿ ಶ್ರೀನಿವಾಸಲು ಶಿಕಾರಿಪುರ ಉಪ ವಿಭಾಗರವರ ಮಾರ್ಗದರ್ಶನದಲ್ಲಿ, ಗುರುರಾಜ್ ಎನ್ ಮೈಲಾರ್ ಪೊಲೀಸ್ ನಿರೀಕ್ಷಕರು ಶಿಕಾರಿಪುರ ವೃತ್ತ ಮತ್ತು ರವಿ ಕುಮಾರ್ ಪಿಎಸ್ಐ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ನೇತೃತ್ವದಲ್ಲಿ, ಸಿಬ್ಬಂದಿಗಳನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿರುತ್ತದೆ.

ಈ ಕಾರ್ಯಾಚರಣೆಯಲ್ಲಿ ಆರೋಪಿ ಪಾಲಾಕ್ಷಪ್ಪನಿಂದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿರುವ / ಮಾರಾಟದ ಬಗ್ಗೆ ಸಾರ್ವಜನಿಕರು ಶಿವಮೊಗ್ಗ ಜಿಲ್ಲಾ ಪೊಲೀಸ್ ದೂರವಾಣಿ ಸಂಖ್ಯೆ 9480803301 ಗೆ ಕರೆ ಮಾಡಿ ಮಾಹಿತಿಯನ್ನು ನೀಡಬಹುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು