ತುಮಕೂರು(19-02-2021): ಮದುವೆ ದಿಬ್ಬಣವನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂದಕಕ್ಕೆ ಉರುಳಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಮಾಳಗಟ್ಟಿಯಲ್ಲಿ ನಡೆದಿದೆ.
ಕೊರಟಗೆರೆ ತಾಲೂಕಿನ ಬೆಟ್ಟಶಮ್ಮನಹಳ್ಳಿಯಲ್ಲಿ ಮದುವೆ ಮುಗಿಸಿದ ಸಂಬಂಧಿಕರು ಬಂಗಾರಹಟ್ಟಿಯಲ್ಲಿ ನಡೆಯುವ ರಿಸೆಪ್ಷನ್ಗೆ ಬಸ್ನಲ್ಲಿ ತೆರಳುತ್ತಿದ್ದರು. 40ರಿಂದ 50 ಜನರು ಇದ್ದ ಈ ಬಸ್ ಮೇಕೆರಹಳ್ಳಿ ಕ್ರಾಸ್ ಬಳಿ ಕಂದಕಕ್ಕೆ ಉರುಳಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದವರಿಗೆ ಗಾಯಗಳಾಗಿವೆ. ಅವರನ್ನು ಶಿರಾದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.