ಅಹಮದಾಬಾದ್ (02-12-2020); ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳದ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರಿಗೆ ದಂಡದ ಜೊತೆಗೆ ಕೋವಿಡ್ ಕೇಂದ್ರಗಳಲ್ಲಿ ಕೆಲಸ ಮಾಡುವ ಶಿಕ್ಷೆಯನ್ನು ನೀಡಲು ಹೈಕೋರ್ಟ್ ಸೂಚಿಸಿದೆ.
ಮಾಸ್ಕ್ ಧರಿಸದೆ ಓಡಾಡುವವರ ದಂಡದ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಅಹಮದಾಬಾದ್ ಹೈಕೋರ್ಟ್, ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸುವವರಿಗೆ ದಂಡದ ಜೊತೆಗೆ ಕೊರೋನಾ ಸಮುದಾಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ಎಂದು ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಜೆ.ಬಿ. ಪಾರ್ಡಿವಾಲಾ ಅವರಿದ್ದ ದ್ವಿಸದಸ್ಯ ನ್ಯಾಯಪೀಠ, ಕೊರೋನಾ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯು 5 ರಿಂದ 15 ದಿನಗಳವರೆಗೆ, ದಿನಕ್ಕೆ 4 ರಿಂದ 6 ಗಂಟೆಗಳ ಕಾಲ ಸಮುದಾಯ ಸೇವೆ ಮಾಡಬೇಕು. ರಾಜ್ಯ ಸರ್ಕಾರ ಇದನ್ನು ಕಡ್ಡಾಯಗೊಳಿಸಬೇಕು ಎಂದು ಹೈಕೋರ್ಟ್ ಶಿಫಾರಸು ಮಾಡಿದೆ.