ಮೇ 2 ರೊಳಗೆ ಮುಖ್ಯಮಂತ್ರಿ ಬದಲಾವಣೆಯಾಗದಿದ್ದರೆ ಬಿಜೆಪಿಯಲ್ಲಿ ಭಾರಿ ಸ್ಪೋಟ : ಶಾಸಕ ಯತ್ನಾಳ್ 

Share on facebook
Share on twitter
Share on linkedin
Share on whatsapp
Share on telegram
Share on email
Share on print

ವಿಜಯಪುರ: ಬರುವ ಮೇ 2 ರೊಳಗೆ ಮುಖ್ಯಮಂತ್ರಿ ಬದಲಾವಣೆಯಾಗದಿದ್ದರೆ ಬಿಜೆಪಿಯಲ್ಲಿ ಭಾರಿ ಸ್ಪೋಟವಾಗಲಿದೆ ಎಂದು ಬಿಜೆಪಿ ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಸಚಿವ ಈಶ್ವರಪ್ಪ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಕುರಿತು ಪ್ರತಿಕ್ರಿಯಿಸಿದ ಅವರು ಕೆ.ಎಸ್.ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅನುಭವ ಹೊಂದಿದವರು. ರಾಜ್ಯದಲ್ಲಿ ಬಿಜೆಪಿ ಕಟ್ಟುವಲ್ಲಿ ಈಶ್ವರಪ್ಪನವರ ಶ್ರಮ ಬಹಳಷ್ಟಿದೆ ಎಂದು ಹೇಳಿದ್ದಾರೆ.

ಅಂಥ ಹಿರಿಯರು ಮುಖ್ಯಮಂತ್ರಿಗಳ ವಿರುದ್ಧ ಬೇಸತ್ತು ರಾಜ್ಯಪಾಲರಿಗೆ ದೂರು ನೀಡಿರುವುದು ತಪ್ಪಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿಗೆ ಬುದ್ಧಿವಾದ ಹೇಳಬೇಕಿತ್ತು. ಅದನ್ನು ಬಿಟ್ಟು ಈಶ್ವರಪ್ಪನವರ ಬಗ್ಗೆ ಮಾತನಾಡಿರುವುದು ಸರಿಯಲ್ಲ. ಅರುಣ್ ಸಿಂಗ್ ಬಿಜೆಪಿ ಪರವಾಗಿದ್ದಾರೆಯೇ ಅಥವಾ ಮುಖ್ಯಮಂತ್ರಿ ಪರವಾಗಿದ್ದಾರೆಯೇ ಎಂದು ಯತ್ನಾಳ್ ಪ್ರಶ್ನಿಸಿದರು. ಮೇ 2 ರೊಳಗೆ ರಾಜ್ಯದ ಮುಖ್ಯಮಂತ್ರಿ ಬದಲಾವಣೆಯಾಗದಿದ್ದರೆ ಪಕ್ಷದಲ್ಲಿ ಭಾರಿ ಸ್ಪೋಟವಾಗಲಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ ತಮ್ಮ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು