ಬೆಂಗಳೂರು(05-01-2021): ಅರ್ಚಕರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಮೂರು ಲಕ್ಷ ರೂಪಾಯಿ ಬಾಂಡ್ ವಿತರಿಸಲಾಗುತ್ತದೆ.
ಈ ಕುರಿತ ‘ಮೈತ್ರಿ’ ಎಂಬ ಯೋಜನೆಗೆ ಸಿಎಂ ಯಡಿಯೂರಪ್ಪ ನಾಳೆ ಚಾಲನೆಯನ್ನು ನೀಡಲಿದ್ದಾರೆ. ಬಾಂಡ್ನ ಹಣವನ್ನು ಮೂರು ವರ್ಷಗಳ ಬಳಿಕ ಫಲಾನುಭವಿಗಳು ಪಡೆಯಬಹುದು.
ಈ ಕುರಿತು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಎಚ್. ಸಚ್ಚಿದಾನಂದ ಮಾಹಿತಿ ನೀಡಿದ್ದು, ಮೈತ್ರಿ ಯೋಜನೆಯಡಿ ವಧುಗಳಿಗೆ ಮೂರು ಲಕ್ಷ ರೂಪಾಯಿ ಬಾಂಡ್ ವಿತರಿಸಲಾಗುತ್ತದೆ. ಅರ್ಚಕರು ಮತ್ತು ಪೌರೋಹಿತ್ಯ ಮಾಡುವವರ ಪೈಕಿ ಹೆಚ್ಚಿನವರು ಅವಿವಾಹಿತರಾಗಿದ್ದಾರೆ. ಹೆಣ್ಣುಮಕ್ಕಳು ಇಂಥವರನ್ನು ಮದುವೆಯಾಗಲು ಹಿಂಜರಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ.