ಮಂಗಳೂರು: ಮೀನಿನ ವಾಹನದಲ್ಲಿ ಗೋಮಾಂಸ ಸಾಗಾಟ: ಟ್ರಕ್ ಅಡ್ಡಗಟ್ಟಿದ ಪೊಲೀಸರು

meet
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಗಳೂರು(18-10-2020): ಮೀನು ಸಾಗಾಟ ಮಾಡುವ ವಾಹನದಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಪೊಲೀಸರು ಇಂದು ಪತ್ತೆ ಮಾಡಿದ್ದಾರೆ.

ಕೇರಳದಿಂದ ಮಂಗಳೂರಿಗೆ ಟ್ರಕ್ ನಲ್ಲಿ ಗೋ ಮಾಂಸ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಪಂಪ್ ವೆಲ್ ಬಳಿ ಟ್ರಕ್ ನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

ಈ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 10 ಟನ್ ಗೋ-ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಈ ಕುರಿತು ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು