ಉತ್ತರ ಪ್ರದೇಶ: ಬಿಜೆಪಿ ಪ್ರಚಾರಕರ ಪಟ್ಟಿಯಲ್ಲಿ ಮೇನಕಾ, ವರುಣ್ ಗಾಂಧಿಗೆ ಸ್ಥಾನವಿಲ್ಲ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಲಕ್ನೊ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹ ಸ್ಟಾರ್ ಪ್ರಚಾರಕರು ಪಟ್ಟಿಯಲ್ಲಿದ್ದರೆ, ಪಕ್ಷದ ಸಂಸದರು ಹಾಗೂ ತಾಯಿ-ಮಗ ಜೋಡಿಯಾದ ಮೇನಕಾ ಗಾಂಧಿ ಹಾಗೂ ವರುಣ್ ಗಾಂಧಿ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಇವರಿಬ್ಬರು ಸುಲ್ತಾನ್‌ಪುರ ಹಾಗೂ ಪಿಲಿಭಿತ್‌ ಲೋಕಸಭಾ ಕ್ಷೇತ್ರದಿಂದ ಹಲವು ಬಾರಿ ವಿಜಯಶಾಲಿಯಾಗಿದ್ದಾರೆ.

ಇತ್ತೀಚೆಗಷ್ಟೇ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲೂ ಇಬ್ಬರನ್ನು ಕೈಬಿಡಲಾಗಿತ್ತು.

ತಾರಾ ಪ್ರಚಾರಕರ ಪಟ್ಟಿಯಲ್ಲಿರುವ ಮೊದಲ ಹೆಸರು ಪ್ರಧಾನಿ ನರೇಂದ್ರ ಮೋದಿ. ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಗೋರಖ್‌ಪುರದ ಬಿಜೆಪಿ ಅಭ್ಯರ್ಥಿ ಆದಿತ್ಯನಾಥ್ ಕೂಡ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಪಟ್ಟಿಯಲ್ಲಿರುವ ಇತರರೆಂದರೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್.

ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಮುಖ್ತಾರ್ ಅಬ್ಬಾಸ್ ನಖ್ವಿ, ದಿನೇಶ್ ಶರ್ಮಾ ಕೇಶವ್ ಪ್ರಸಾದ್ ಮೌರ್ಯ , ಸಂಜೀವ್ ಬಲ್ಯಾನ್ ಮತ್ತು ರಾಧಾ ಮೋಹನ್ ಸಿಂಗ್ ಸೇರಿದಂತೆ ಇತರರು ಪಟ್ಟಿಯಲ್ಲಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು