ರಾಜ್ಯದಲ್ಲಿ ಎಮ್ ಇ ಎಸ್ ಸಂಘಟನೆಯನ್ನು ಬ್ಯಾನ್ ಮಾಡಲು ಚಿಂತನೆ : ಗೃಹ ಸಚಿವ ಆರಗ ಜ್ಞಾನೇಂದ್ರ

Share on facebook
Share on twitter
Share on linkedin
Share on whatsapp
Share on telegram
Share on email
Share on print

ರಾಜ್ಯದಲ್ಲಿ ಎಮ್ ಇ ಎಸ್ (ಮಹಾರಷ್ಟ್ರ ಏಕೀಕರಣ ಸಮಿತಿ) ಸಂಘಟನೆಯನ್ನು ನಿಷೇಧಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಕನ್ನಡ ಧ್ವಜ ಸುಟ್ಟ ಪ್ರಕರಣ, ಕನ್ನಡಿಗರ ಮೇಲಿನ ದೌರ್ಜನ್ಯ ಪ್ರಕರಣ ಮತ್ತು ಸಂಗೊಳ್ಳಿ ರಾಯಣ್ಣರ ಪ್ರತಿಮೆಯನ್ನು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಈ ಕ್ರಮವನ್ನು ಕೈಗೊಳ್ಳಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ.

ಆದರೆ ಇನ್ನೊಂದು ಕಡೆ ವಸತಿ ಸಚಿವ ವಿ ಸೋಮಣ್ಣ ” ಎಮ್ ಇ ಎಸ್ ಸಂಘಟನೆಯವರು ನಮ್ಮವರೇ. ನಿಷೇಧಿಸಲು ಯಾವುದೇ ಚಿಂತನೆ ನಡೆಸಿಲ್ಲ. ಆದರೆ ಪುಂಡಾಟಿಕೆ ಮಾಡುವುದು ಸರಿಯಲ್ಲ” ಎಂದು ಮಾಧ್ಯಮದವರೊಂದಿಗೆ ಹೇಳಿದ್ದಾರೆ. ರಾಜ್ಯ ಸರಕಾರ ಯಾವ ತೀರ್ಮಾನವನ್ನು ಕೈಗೊಳ್ಳುತ್ತೆ ಎಂಬುವುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು