ಬೆಂಗಳೂರು(04-11-2020): ಬಿಸಿಯೂಟದ ಅನುದಾನ ರಿಲೀಸ್ ಆಗಿದ್ದು, ವಿದ್ಯಾರ್ಥಿಗಳಿಗೆ ಮನೆಬಾಗಿಲಿಗೆ ಆಹಾರ ಧಾನ್ಯಗಳನ್ನು ವಿತರಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಬಿಸಿಯೂಟ ಯೋಜನೆಯಲ್ಲಿ ಬಾಕಿ ಇದ್ದ 5 ತಿಂಗಳವರೆಗಿನ ಅನುದಾನ ಬಿಡುಗಡೆ ಮಾಡಿ ಮಕ್ಕಳಿಗೆ ಆಹಾರಧಾನ್ಯ ವಿತರಿಸಲು ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಇದಕ್ಕಾಗಿ ಸರ್ಕಾರ 450 ಕೋಟಿ ರೂ. ಬಿಡುಗಡೆ ಮಾಡಿದೆ.
2020 -21ನೇ ಶೈಕ್ಷಣಿಕ ವರ್ಷದ ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ ತಿಂಗಳವರೆಗಿನ ಅನುದಾನ ಬಿಡುಗಡೆ ಮಾಡಲಾಗಿದೆ.
ಇನ್ನು ಅಡುಗೆ ತಯಾರಿಕಾ ವೆಚ್ಚಕ್ಕೆ ಸಮನಾಗುವಂತೆ ತೊಗರಿಬೇಳೆ ಮತ್ತು ಆಹಾರಧಾನ್ಯ ವಿದ್ಯಾರ್ಥಿಗಳಿಗೆ ಸಿಗಲಿದೆ.