ಮಧ್ಯಪ್ರದೇಶ (05-12-2020): ಕೋವಿಡ್-19 ನಿಂದಾಗಿ ನಿರುದ್ಯೋಗಿಗಳಾಗಿ ರಾಜ್ಯಕ್ಕೆ ಮರಳಿದ ವಲಸೆ ಕಾರ್ಮಿಕರಿಗೆ ಪುನರ್ವಸತಿ ಮಾಡಲು ನಿರ್ದಿಷ್ಟ ಯೋಜನೆಯನ್ನು ರೂಪಿಸುವಂತೆ ಮಧ್ಯಪ್ರದೇಶ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ವಲಸೆ ಕಾರ್ಮಿಕರಿಗಾಗಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ರಾಜ್ಯವು ನೀಡಿರುವ ಮಾಹಿತಿಯ ಬಗ್ಗೆಯೂ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಸಂಜಯ್ ಯಾದವ್ ಮತ್ತು ನ್ಯಾಯಮೂರ್ತಿ ವಿ ಕೆ ಶುಕ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಜ್ಯ ಸರಕಾರ ತಯಾರಿಸಿದ ಚಾರ್ಟ್ನಿಂದ ನಾವು ತೃಪ್ತರಾಗಿಲ್ಲ. ಬದಲಾಗಿ, ಈ ವಲಸೆ ಬಂದ ಕಾರ್ಮಿಕರನ್ನು ಪುನರ್ವಸತಿಗೊಳಿಸಲು ಅವರು ಒಂದು ನಿರ್ದಿಷ್ಟ ಯೋಜನೆಯನ್ನು ರೂಪಿಸುವ ಅಗತ್ಯವಿರುತ್ತದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.