ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ವಿಧಾನ ಪರಿಷತ್ ಕಲಾಪದಲ್ಲಿ , ಕಲಾಪ ನಿರ್ವಹಣೆ ಕುರಿತು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ್ ಸೇರಿದಂತೆ ಕೆಲವು ಹಿರಿಯ ಕಾಂಗ್ರೆಸ್‌ ನಾಯಕರು ಆಡಿದ ಮಾತಿನಿಂದ ತೀವ್ರ ಮನನೊಂದು ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸನ್ಮವೇಶ ನಡೆದಿದೆ.

ನಂತರ ಎಸ್‌.ಆರ್‌. ಪಾಟೀಲ್‌ ಮತ್ತಿತರರು ವಿಷಾದ ವ್ಯಕ್ತಪಡಿಸಿದ್ದರಿಂದ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಿರಿಯ ನಾಯಕರು ಮನವೊಲಿಸಿದ ಹಿನ್ನೆಲೆಯಲ್ಲಿ ಹೊರಟ್ಟಿ ಅವರು ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

“ಕೆಲ ಸದಸ್ಯರ ಮಾತುಗಳಿಂದ ಬೇಸರಗೊಂಡು ರಾಜೀನಾಮೆ ನಿರ್ಧಾರಕ್ಕೆ ಮುಂದಾಗಿದ್ದೆ. ಆದರೆ ಮುಖ್ಯಮಂತ್ರಿ ಮತ್ತು ಅನೇಕ ಸದಸ್ಯರು ಅಂತಹ ನಿರ್ಧಾರ ಬೇಡ ಎಂದಿದ್ದರಿಂದ, ಅವರ ಪ್ರೀತಿಗೆ ಸೋತು ನಿರ್ಧಾರದಿಂದ ಹಿಂದೆ ಸರಿದಿದ್ದೇನೆ. ಸಿಎಂ ಹಾಗೂ ಸದಸ್ಯರು ತೋರಿದ ಪ್ರೀತಿಗೆ ಅಭಾರಿಯಾಗಿದ್ದೇನೆ’ ಎಂದು ಸಭಾಪತಿ ಹೊರಟ್ಟಿ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು