ಮಂಗಳೂರು(13-10-2020): ಹಾಲು ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಂಗಳೂರಿನಲ್ಲಿ ಪತ್ತೆಯಾಗಿದೆ.
ಇಂದು ಬೆಳಿಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಬಳಿ ಬಜರಂಗದಳದ ಕಾರ್ಯಕರ್ತರು ವಾಹನ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಹಾಸನದಿಂದ ಕುದ್ರೋಳಿಗೆ ಬರುತ್ತಿದ್ದ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ವರದಿಗಳು ತಿಳಿಸಿದೆ. ಈ ಕುರಿತು ಬಂದರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.