ಹೊಸದೆಹಲಿ(20/10/2020): ಪ್ರತಿಯೊಬ್ಬ ಪ್ರಜೆಗೂ ಕೋವಿಡ್ -19 ಲಸಿಕೆ ಲಭ್ಯವಾಗುವಂತೆ ಮಾಡಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಇಂದು ಸಂಜೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಲಾಕ್ ಡೌನ್ ಪ್ರಕ್ರಿಯೆ ಕೊನೆಗೊಂಡಿದೆ. ಆದರೆ, ಕೊರೋನಾ ಮುಕ್ತವಾಗಿಲ್ಲ. ಆದ್ದರಿಂದ ನಾವು ಮತ್ತಷ್ಟು ಜವಾಬ್ದಾರಿಯಿಂದಿರಬೇಕಿದೆ ಎಂದರು.
ಕೋವಿಡ್ 19ಗೆ ಲಸಿಕೆ ಬರುವವರೆಗೂ ನಾವು ಎಚ್ಚರಿಕೆವಹಿಸಬೇಕು. ಲಸಿಕೆಯನ್ನು ದೇಶದ ಪ್ರತಿಯೊಬ್ಬರಿಗೆ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.