ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ‌ ಕೈ’ ಎಂಬ ಸಂದೇಶ ನೀಡಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ. ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರದ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿಯವರ ಭಾಷಣ ಯಾವುದೇ ಉಪಯೋಗ ಇಲ್ಲ, ಜನತೆಗೆ ಆರ್ಥಿಕ ನೆರವು ನೀಡುವ ಕುರಿತು ಪ್ರಧಾನಿಗಳು ಮಾತನಾಡಲಿಲ್ಲ ಎಂದು ಅವರು ಟೀಕಿಸಿದರು.

ರಾಜ್ಯದಲ್ಲಿ ಕೊರೊನಾ ಸೋಂಕಿತರು‌ ಚಿಕಿತ್ಸೆಗೆ ಆಮ್ಲಜನಕ ಇಲ್ಲದೆ, ಐಸಿಯು ಹಾಸಿಗೆಗಳಿಲ್ಲದೆ,‌ ರೆಮಿಡಿಸಿವೆರ್‌ನಂತಹ ಪ್ರಾಣರಕ್ಷಕ ಔಷಧಿ ಸಿಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ಮೋದಿ ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ. ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ. ಕೊರೊನಾ ಉಲ್ಭಣಗೊಂಡಿರುವ ಕಾರಣದಿಂದಾಗಿ ಲಾಕ್‌ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಸರ್ಕಾರ ಮಾತನಾಡುತ್ತಿದೆ. ಲಾಕ್ ಡೌನ್ ಹೇರಿದರೆ ಕಷ್ಟನಷ್ಟಕ್ಕೀಡಾಗುವ ಜನತೆಗೆ ಕೇಂದ್ರಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ‌ ಕೈ’ ಎಂಬ ಸಂದೇಶ ನೀಡಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೊರೊನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವನ್ನು ಕೊಡುವುದು ಬೇಡ, ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಪ್ರಧಾನಿ ಮೋದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು