ಪಟ್ನಾ(16/11/2020): ನಾಲ್ಕನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಪ್ರಧಾನಿ ಅಭಿನಂದಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು ‘ಎನ್ಡಿಎ ಕೂಟವು ಬಿಹಾರದ ಅಭಿವೃದ್ಧಿಗಾಗಿ ಒಗ್ಗಟಿನಿಂದ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.
ಬಿಹಾರದ ಕಲ್ಯಾಣಕ್ಕಾಗಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ’ ಎಂದು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನಿತೀಶ್ ಅವರೊಂದಿಗೆ ಬಿಜೆಪಿ ಶಾಸಕರಾದ ತಾರಕಿಶೋರ್ ಪ್ರಸಾದ್ ಮತ್ತು ರೇಣು ದೇವಿ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.