ಚಿತ್ರದುರ್ಗ(08-10-2020): ಜಮೀನೊಂದರಲ್ಲಿ 50, 100 ಹಾಗೂ 2,000 ಮುಖಬೆಲೆಯ ಕಂತೆ-ಕಂತೆ ಹಣ ಚಳ್ಳಕೆರೆ ತಾಲ್ಲೂಕಿನ ಬುಕ್ಲೊರ ಹಳ್ಳಿಯಲ್ಲಿ ಪತ್ತೆಯಾಗಿದೆ.
ಪೊದೆಯ ಸಮೀಪ ಹಣ ಇರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಸಿಪಿಐ ಮಂಜುನಾಥ್ ಮತ್ತು ಎಸ್ಐ ಸತೀಶನಾಯ್ಕ್ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗಷ್ಟೇ ಇದೇ ಜಮೀನಿನ ಪಕ್ಕದಲ್ಲಿರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ದಿಲೀಪ್ ಬ್ಯುಲ್ಡ್ ಕಂಪನಿಯ ಕಚೇರಿಯಲ್ಲಿ 36ಲಕ್ಷ ಹಣ ಕಳ್ಳತನವಾಗಿತ್ತು. ಈ ಕುರಿತು ತನಿಖೆ ನಡೆಯುತ್ತಿದೆ.