ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ಪ್ರಯಾಣಕರು ಹೈರಾಣ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಕೆಲವೆಡೆ ಬಸ್ ಸಂಚಾರ ಆರಂಭವಾಗಿದ್ದರೂ ಸುಗಮ ಸಂಚಾರಕ್ಕೆ ಅನುವು ಆಗಿಲ್ಲ. ಸರ್ಕಾರದ ಎಚ್ಚರಿಕೆಗಳಿಗೆ ಜಗ್ಗದ ಸಾರಿಗೆ.ನೌಕರರು ಇಂದು ಕೂಡ ಕೂಡ ಮುಷ್ಕರ ಮುಂದುವರೆಸಲು ನಿರ್ಧರಿಸಿದ್ದಾರೆ.

ರಾಜ್ಯದಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಖಾಸಗಿ ಬಸ್ ಗಳ ಪ್ರಯಾಣ ದರ ಹೆಚ್ಚಿಸಿವೆ. ಯುಗಾದಿ ಹಬ್ಬದ ಪ್ರಯುಕ್ತ ಊರಿನ ಕಡೆಗೆ ತೆರಳುವ ಪ್ರಯಾಣಿಕರು ಪರದಾಡುವಂತಾಗಿದೆ.

ನೌಕರರ ಮುಷ್ಕರಕ್ಕೆ ಬ್ರೇಕ್ ಹಾಕಲು ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ 128 ಸಿಬ್ಬಂದಿಯನ್ನು ವಜಾಗೊಳಿಸಿದೆ. ನಿವೃತ್ತ ಚಾಲಕರು ಮತ್ತು ನಿರ್ವಾಹಕರ ನಿಯೋಜಿಸಲು ಅರ್ಜಿ ಆಹ್ವಾನಿಸಿದೆ. ‘ಎಸ್ಮಾ’ ಜಾರಿಗೊಳಿಸುವ ಎಚ್ಚರಿಕೆ ನೀಡಲಾಗಿದೆ. ಪ್ರಯಾಣಿಕರಿಂದ ದುಬಾರಿ ದರ ವಸೂಲಿ ಮಾಡುತ್ತಿರುವ ಖಾಸಗಿ ವಾಹನಗಳ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

ಸಾರಿಗೆ ನೌಕರರಿಗೆ ಮಾರ್ಚ್ ತಿಂಗಳ ಸಂಬಳ ನೀಡಿಲ್ಲ.ಯುಗಾದಿ ಹಬ್ಬ ಹೇಗೆ ಆಚರಿಸಬೇಕು. ಇದರಿಂದ ನೌಕರರಿಗೆ ತೊಂದರೆ ಆಗುತ್ತಿದೆ. ಸರ್ಕಾರ ಸಾರಿಗೆ ನೌಕರರಿಗೆ ಮಲತಾಯಿ ಧೋರಣೆ ಮಾಡುತ್ತಿದೆ. ನೌಕರರಿಗೆ 6ನೇ ವೇತನ ಜಾರಿಗೊಳಿಸುವಂತೆ ಮುಷ್ಕರ ಒಕ್ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು