ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲ್ತೀವಿ : ಸಚಿವ ಪ್ರಭು ಚವ್ಹಾಣ ವಿಶ್ವಾಸ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೀದರ್(ಬಸವಕಲ್ಯಾಣ): ಬಸವಕಲ್ಯಾಣ ,ಮಸ್ಕಿ ಹಾಗೂ ಬೆಳಗಾವಿಯ ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಚಿವ ಪ್ರಭು ಚವ್ಹಾಣ ಅಭಿಪ್ರಾಯಪಟ್ಟಿದ್ದಾರೆ.

ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಸಚಿವರು ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ ನವರು ಜನರಿಗೆ ಸುಳ್ಳು ಹೇಳ್ತಾರೆ, ಅವರ ಮಾತಿನಲ್ಲಿ ದಮ್ ಇಲ್ಲ, ಜನರು ಕಾಂಗ್ರೆಸ್ ನವರಿಗೆ ಗೆಲ್ಲಿಸಿ ಏನ್ ಮಾಡ್ತಾರೆ, ಕೇಂದ್ರ ಹಾಗೂ ರಾಜ್ಯದಲ್ಲಿಯೂ ನಮ್ಮದೇ ಸರ್ಕಾರ ಇದೆ, ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡ್ತೀವಿ, ಹೀಗಾಗಿ ಮೂರು ಕ್ಷೇತ್ರದಲ್ಲಿ ಮತದಾರರು ಬಿಜೆಪಿಯನ್ನೇ ಗೆಲ್ಲಿಸುತ್ತಾರೆಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ಎಪ್ರಿಲ್ 17 ರಂದು ಮೂರು ಕ್ಷೇತ್ರಗಳ ಉಪಚುನಾವಣೆಗೆ ಅಬ್ಬರದ ಪ್ರಚಾರ ನಡೆಸುತ್ತಿರುವ ನಾಯಕರು ಮತದಾರರನ್ನು ಸೆಳೆಯುವ ಪ್ರಯತ್ನ ಜೋರಾಗಿ ನಡೆಯುತ್ತಿದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಕಾಂಗ್ರೆಸ್ ಜೆಡಿಎಸ್ ಬಿಜೆಪಿ ಮೂರು ಪಕ್ಷಗಳ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಚತುಷ್ಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ಕಲ್ಯಾಣ ಎಂಬುದು ತುಂಬಾ ಕುತೂಹಲ ಮೂಡಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು