ಕಾಂಗ್ರೆಸ್ ಮುಖಂಡನ ಸ್ಟಾರ್ ಪ್ರಚಾರಕ ಸ್ಥಾನಮಾನ ರದ್ದುಗೊಳಿಸಿದ ಚುನಾವಣಾ ಆಯೋಗ

presskannada
Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೊಸದೆಹಲಿ(30/10/2020):  ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ‘ಸ್ಟಾರ್ ಪ್ರಚಾರಕ’ ಸ್ಥಾನಮಾನವನ್ನು ಚುನಾವಣಾ ಆಯೋಗ ಇಂದು ರದ್ದುಪಡಿಸಿದೆ.

ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯ ಪ್ರಚಾರದ ವೇಳೆ ಚುನಾವಣಾ ನೀತಿ ಸಂಹಿತೆಯನ್ನು ಪದೇ ಪದೆ ಉಲ್ಲಂಘಿಸಿದ್ದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಆಯೋಗ ತಿಳಿಸಿದೆ.

‘ಚುನಾವಣಾ ನೀತಿ ಸಂಹಿತೆಯನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ  ಕಮಲ್‌ನಾಥ್‌ ಅವರ ರಾಜಕೀಯ ಪಕ್ಷದ ಸ್ಟಾರ್ ಪ್ರಚಾರಕ ಸ್ಥಾನಮಾನವನ್ನು ಈ ಉಪ ಚುನಾವಣೆಗೆ ಅನ್ವಯವಾಗುವಂತೆ  ರದ್ದುಪಡಿಸಲಾಗಿದೆ’ ಎಂದು ಆಯೋಗ ಹೇಳಿದೆ.

ಸ್ಟಾರ್ ಪ್ರಚಾರಕ ಸ್ಥಾನಮಾನ ರದ್ದುಗೊಂಡಿರುವುದರಿಂದ  ಇನ್ನು ಮುಂದೆ ಕಮಲ್‌ನಾಥ್ ಅವರು ಯಾವುದೇ ಪ್ರಚಾರ ಕೈಗೊಂಡರೆ, ಪ್ರಯಾಣ, ವಾಸ್ತವ್ಯ ಮತ್ತು ಭೇಟಿಗೆ ಸಂಬಂಧಿಸಿದ ಸಂಪೂರ್ಣ ವೆಚ್ಚವನ್ನು ಸಂಬಂಧಿಸಿದ ಕ್ಷೇತ್ರದ ಅಭ್ಯರ್ಥಿಯೇ ಭರಿಸಬೇಕಾಗುತ್ತದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು