ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಸೋಂಕು: ಮಣಿಪಾಲ ಆಸ್ಪತ್ರೆಗೆ ದಾಖಲು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಮುಖ್ಯಮಂತ್ರಿ ಅವರಿಗೆ ಕೋವಿಡ್ ದೃಢಪಟ್ಟಿದ್ದು , ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣ ಉಪಚುನಾವಣೆ ಹಿನ್ನೆಲೆಯಲ್ಲಿ ಮೂರು ಕ್ಷೇತ್ರದಲ್ಲಿ ರೋಡ್ ಶೋ, ಸಭೆಗಳಲ್ಲಿ ಭಾಗಿಯಾಗಿದ್ದರು, ಇದರಿಂದ ಎರಡು ದಿನಗಳ ಹಿಂದೆ ಅವರಿಗೆ ಜ್ವರ ಹಾಗೂ ಉಷ್ಣತೆ ಕಂಡುಬಂದಿತ್ತು, ಇಂದು ಟೇಸ್ಟ್ ಮಾಡಿಸಿದಾಗ ಕೊರೊನಾ ಪಾಸಿಟಿವ್ ವರದಿ ಬಂದಿದೆ, ಚಿಕಿತ್ಸೆ ಪಡೆಯಲು ರಾಮಯ್ಯ ಆಸ್ಪತ್ರೆಯಿಂದ ಮಣಿಪಾಲ ಆಸ್ಪತ್ರೆಗೆ ಕಾರಿನಲ್ಲಿ ಆಗಮಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಕೊರೊನಾ ಲಸಿಕೆ ಒಂದು ಡೋಸ್ ಪಡೆದಿದ್ದಾರೆ, ಎರಡನೇ ಡೋಸ್ ಪಡೆಯುವ ಮುನ್ನವೇ ಮತ್ತೆ ಪಾಸಿಟಿವ್ ಕಂಡುಬಂದಿದೆ, ಯಡಿಯೂರಪ್ಪನವರಿಗೆ ಹಿಂದೊಮ್ಮೆ ಕೊರೊನಾ ಬಂದಿತ್ತು, ಇದು ಎರಡನೇ ಬಾರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಸಿಎಂ ಅವರಿಗೆ 78 ವಯಸ್ಸು, ಅವರಿಗೆ ಹೆಚ್ಚಿನ ಚಿಕಿತ್ಸೆ ಪಡೆಯಲು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ. ನನ್ನ. ಸಂಪರ್ಕಕ್ಕೆ ಬಂದಿದವರು ಕ್ವಾರಂಟೈನ್ ನಲ್ಲಿದ್ದು ಟೇಸ್ಟ್ ಮಾಡಿಸಿಕೊಳ್ಳಿ ಎಂದು ಸಿಎಂ ಮನವಿ ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು