ಮುಂಬೈ ಡ್ರಗ್ಸ್ ಪ್ರಕರಣ: ಆರ್ಯಾನ್ ಖಾನ್ ಗೆ ಜಾಮೀನು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ: ಮುಂಬೈ ಡ್ರಗ್ಸ್‌ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಆರ್ಯನ್‌ ಖಾನ್‌ ಅವರಿಗೆ ಗುರುವಾರ ಬಾಂಬೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯವು ಮೂರು ದಿನಗಳ ವಿಚಾರಣೆ ಬಳಿಕ ಜಾಮೀನು ಇಂದು ಮಂಜೂರು ಮಾಡಿದೆ. ನಟ ಶಾರುಕ್‌ ಖಾನ್‌ ಮಗ ಆರ್ಯನ್‌ ಖಾನ್‌ ಪರ ಭಾರತದ ಮಾಜಿ ಅಟಾರ್ನಿ ಜನರಲ್‌, ವಕೀಲ ಮುಕುಲ್‌ ರೋಹಟಗಿ ವಾದ ಮಂಡಿಸಿದ್ದರು.

ಮುಂಬೈನ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್‌ 2ರಂದು ಆರ್ಯನ್ ಖಾನ್‌ ಅವರನ್ನು ಎನ್‌ಸಿಬಿ ವಶಕ್ಕೆ ಪಡೆದಿತ್ತು. 21 ದಿನಗಳಿಂದ ಆರ್ಯನ್‌ ಜೈಲುವಾಸದಲ್ಲಿ ಇದ್ದರು.

ಆರ್ಯನ್‌ ಖಾನ್‌ ಜೊತೆಗೆ ಆರೋಪಿಗಳಾದ ಅರ್ಬಾಜ್‌ ಮರ್ಚಂಟ್‌ ಮತ್ತು ಮನ್ಮನ್‌ ಧಮೇಚಾ ಅವರಿಗೂ ಬಾಂಬೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಈವರೆಗೂ ಪ್ರಕರಣದಲ್ಲಿ ನೈಜೀರಿಯಾದ ಇಬ್ಬರು ಸೇರಿದಂತೆ ಒಟ್ಟು 20 ಜನರನ್ನು ಎನ್‌ಸಿಬಿ ಬಂಧಿಸಿದೆ.

ಮಾಧ್ಯಮಗಳ ಮುಂದೆ ಹೇಳಿಕೆ ನೀಡಬಾರದು, ವಿದೇಶ ಪ್ರಯಾಣ ಸೇರಿದಂತೆ ಇನ್ನಿತರ ಷರತ್ತು ಅನ್ವಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದ ಮನೀಶ್‌ ರಾಜ್‌ಗರಿಯಾ ಮತ್ತು ಅವಿನ್‌ ಸಾಹು ಅವರಿಗೆ ವಿಶೇಷ ನ್ಯಾಯಾಲಯವು ಮಂಗಳವಾರ ಜಾಮೀನು ನೀಡಿತ್ತು. ವಿಶೇಷ ನ್ಯಾಯಾಲಯದಲ್ಲಿ ಜಾಮೀನು ದೊರೆಯದ ಹಿನ್ನೆಲೆಯಲ್ಲಿ ಆರ್ಯನ್‌ ಖಾನ್‌ ಅವರು ಬಾಂಬೆ ಹೈಕೋರ್ಟ್‌ ಮೊರೆಹೋಗಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು