ಮುಂದಿನ ಮುಖ್ಯಮಂತ್ರಿ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ: ಎಚ್.ಡಿ.ಕುಮಾರಸ್ವಾಮಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರೇ, ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಕ್ಕಾಗಿ ಕಾಂಗ್ರೆಸ್ ಸೋತಿದೆ ಎಂದು ಹೇಳಿದ್ದೀರಿ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೋ? ಜೆಡಿಎಸ್ ಮೇಲೆ ಅಸಮಾಧಾನವೋ? ಅರ್ಥವಾಗುತ್ತಿಲ್ಲ. ಅಷ್ಟಕ್ಕೂ ನೀವು ಯಾವ ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ನಂತರ ರಾಜಕೀಯ ನಾಯಕರು ಪರಸ್ಪರ ಆರೋಪಗಳಲ್ಲಿ ತೊಡಗಿದ್ದಾರೆ. ಬಸವಕಲ್ಯಾಣದಲ್ಲಿ ಜೆಡಿಎಸ್ ಪಕ್ಷ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್ ಪಕ್ಷ ಸೋಲಿಗೆ ಜೆಡಿಎಸ್ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಮುಂದಿನ ಮುಖ್ಯಮಂತ್ರಿ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಪಕ್ಷ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ. ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಎಲ್ಲ ಸ್ವಾತಂತ್ರ್ಯವನ್ನು ಹೊಂದಿದೆ ಮತ್ತು ಬರುವ ದಿನಗಳಲ್ಲಿ ಮತ್ತಷ್ಟು ಸಮರ್ಥವಾಗಿ ಜನರ ವಿಶ್ವಾಸ ಗೆಲ್ಲಲಿದೆ ಎಂಬುದು ನಿಮಗೆ ಗೊತ್ತಿರಲಿ ಎಂದು ಹೇಳಿದ್ದಾರೆ.

ಬಸವ ಕಲ್ಯಾಣದಲ್ಲಿ ಸೋತಿದ್ದೀರಿ ಸರಿ. ಮಸ್ಕಿಯಲ್ಲೂ ನಿಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಬಯಸಿದವರು ನೀವು. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ನೀವು ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀರಿ ಎಂಬುದನ್ನು ಕಾಂಗ್ರೆಸ್ ಸ್ನೇಹಿತರೆ ಕಂಡಿದ್ದಾರೆ. ಬಸವಕಲ್ಯಾಣದಲ್ಲಿ ಜೆಡಿಎಸ್ ಪಡೆದ ಮತಗಳು ನಮ್ಮ ಮತಗಳು ಎಂದಿದ್ದೀರಿ. ಇದು ಪ್ರಜ್ಞಾವಂತ ಮತದಾರನಿಗೆ ನೀವು ಮಾಡಿದ ಅವಮಾನ ಅಲ್ಲದೆ ಮತ್ತೇನು? ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ? ಜನಾದೇಶವನ್ನು ಒಪ್ಪಿಕೊಳ್ಳುವ ನಿಸ್ಪೃಹ ಮನಸ್ಸು ನಿಮಗೂ ಇರಬೇಕಲ್ಲವೇ? ಅಲ್ಪಸಂಖ್ಯಾತರು ಮತ್ತು ಜೆಡಿಎಸ್ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ ಎಂದು ಎಚ್. ಡಿ.ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು