ಮಂಗಳೂರು(19-02-2021): ಕಾಟಿಪಳ್ಳದ ರೌಡಿಶೀಟರ್ ಪಿಂಕಿ ನವಾಝ್ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕಾಶ್ ಭಂಡಾರಿ (29), ಶಾಕೀಬ್(29) ಶೈಲೇಶ್ ಪೂಜಾರಿ (19), ಹನೀಫ್ (20), ಸುವಿನ್ ಕಾಂಚನ್ (23), ಲಕ್ಷ್ಮೀಶ್ (26), ಅಹ್ಮದ್ ಸಾದಿಕ್ (23), ನಿಸಾರ್ ಹುಸೈನ್ (29), ರಂಜನ್ ಶೆಟ್ಟಿ (24) ಬಂಧಿತ ಆರೋಪಿಗಳು.
ಪಿಂಕಿ ನವಾಝ್ ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಫೆ.10ರಂದು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೆ ಯತ್ನಿಸಿದ್ದರು. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.