ಮುಷ್ಕರ ಮುಂದುವರಿಯುತ್ತಿರುವ ನಡುವೆಯೇ ಸಾರಿಗೆ ನೌಕರ ಆತ್ಮಹತ್ಯೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಳಗಾವಿ: ಸಾರಿಗೆ ನೌಕರರ ಅನಿರ್ದಿಷ್ಠಾವಧಿಯ ಮುಷ್ಕರವು ಮೂರನೇ ದಿನಕ್ಕೆ ಕಾಲಿಟ್ಟಿದೆ. ನಡುವೆ ಸಾರಿಗೆ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಶಿವಕುಮಾರ್ ನೀಲಗಾರ (40) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ಸಾರಿಗೆ ನೌಕರ. ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ. ಇವರು ವಾಕರಾರಸಾ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು, ಜಿಎಸ್‍ಟಿ , ನಂತರ ಲಾಕ್ಡೌನ್, ಇದೀಗ ಮುಷ್ಕರ ಎಲ್ಲವೂ ಸೇರಿ ನೌಕರರ ಬದುಕು ಅತಂತ್ರವಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು