ನಮಗೆ ಅನುಮತಿ ಕೊಡಿ,ನಾವು ಕೂಡ ಸರ್ಕಾರದ ಜತೆ ಕೈ ಜೋಡಿಸಿ ಜನ ಸೇವೆ ಮಾಡುತ್ತೇವೆ : ಡಿಕೆಶಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ 100 ಕೋಟಿ ರೂಪಾಯಿ ಯೋಜನೆಗೆ ಸರ್ಕಾರ ಮೊದಲು ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣವನ್ನು ಲಸಿಕೆಗೆ ಬಳಸಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.

ಕೋವಿಡ್‌ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ.ರೋಗಿಗಳಿಗೆ ಅಗತ್ಯ ಆಕ್ಸಿಜನ್, ಬೆಡ್, ಔಷಧಿಗಳು, ವೆಂಟಿಲೇಟರ್ ಯಾವುದನ್ನೂ ವ್ಯವಸ್ಥೆ ಮಾಡಲು ಈ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿ ನಡೆಯಿಂದಾಗಿ ಸಾಮಾನ್ಯ ಜನತೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಶಾಸಕರ ನಿಧಿ 2 ಕೋಟಿ ರೂಪಾಯಿಯಲ್ಲಿ ಶೇ.25 ರಷ್ಟು ಅನುದಾನ ಬಳಸಿಕೊಳ್ಳಲು ಸರ್ಕಾರ ಹೇಳಿದೆ. ಹಾಸಿಗೆ, ವೆಂಟಿಲೇಟರ್ ಖರೀದಿಗೆ ಬಳಸಲು ಅನುಮತಿ ಇದೆ. ಹೀಗಾಗಿ ನಾವು 100 ಕೋಟಿ ಮೊತ್ತದ ಕಾರ್ಯಕ್ರಮ ರೂಪಿಸಿ, ಸರ್ಕಾರದ ಅನುಮತಿ ಕೋರಿದ್ದೇವೆ ಎಂದಿದ್ದಾರೆ.

“ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ
ನಮ್ಮಲ್ಲಿ ಒಟ್ಟು 93 ಶಾಸಕರು ಹಾಗೂ ಪರಿಷತ್ ಸದಸ್ಯರಿದ್ದು, ಉಳಿದ ಮೊತ್ತವನ್ನು ನಮ್ಮ ಕಾರ್ಯಕರ್ತರ ಬಳಿ ಭಿಕ್ಷೆ ಎತ್ತಾದರೂ ಸಂಗ್ರಹಿಸುತ್ತೇವೆ. ಈ ಜನಪರ ಕೆಲಸಕ್ಕೆ ಸರ್ಕಾರ ಅನುಮತಿ ನೀಡಲಿ. ನಾವು ಕೂಡ ಸರ್ಕಾರದ ಜತೆ ಕೈ ಜೋಡಿಸಿ ಜನ ಸೇವೆ ಮಾಡುತ್ತೇವೆ” ಎಂದು ಡಿಕೆಶಿ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು