ನಾವು ವಿಶ್ವದ ಅತಿದೊಡ್ಡ ಪ್ರತಿಮೆಯನ್ನು ಹೊಂದಿದ್ದೇವೆ, ಆದರೆ ಆಸ್ಪತ್ರೆಗಳಲ್ಲಿ ನಮಗೆ ಸಣ್ಣ ವೈದ್ಯಕೀಯ ಸೌಲಭ್ಯಗಳಿಲ್ಲ : ನಿರ್ದೇಶಕ ರಾಮ್ ಗೋಪಾಲ್ ವರ್ಮಾ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೈದರಾಬಾದ್ : “ನಾವು ವಿಶ್ವದ ಅತಿದೊಡ್ಡ ಪ್ರತಿಮೆಯನ್ನು ಹೊಂದಿದ್ದೇವೆ, ನಾವು ವಿಶ್ವದ ಅತಿದೊಡ್ಡ ಕ್ರೀಡಾಂಗಣವನ್ನು ಹೊಂದಿದ್ದೇವೆ, ನಾವು ವಿಶ್ವದ ಅತಿದೊಡ್ಡ ಚುನಾವಣಾ ರ್ಯಾಲಿಗಳನ್ನು ಹೊಂದಿದ್ದೇವೆ, ನಾವು ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳನ್ನು ಹೊಂದಿದ್ದೇವೆ, ಆದರೆ ನಮ್ಮ ಆಸ್ಪತ್ರೆಗಳಲ್ಲಿ ನಮಗೆ ಸಣ್ಣ ವೈದ್ಯಕೀಯ ಸೌಲಭ್ಯಗಳಿಲ್ಲ” ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ರಾಮ್ ಗೋಪಾಲ್ ಅವರು ದೇಶದಲ್ಲಿ ಕೊರೊನಾ ಎರಡನೇ ಅಲೆಯ ಭೀಕರ ಪರಿಸ್ಥಿತಿ ಎದುರಾಗಿದೆ, ಇದನ್ನು ಎದುರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದ್ದಾರೆ.

ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ, ಪ್ರತಿದಿನ 3 ಲಕ್ಷ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, 2 ಸಾವಿರ ಜನರು ಸಾವನ್ನಪ್ಪುತ್ತಿದ್ದಾರೆ, ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್ , ಆಕ್ಸಿಜನ್ ಕೊರತೆಯಿಂದ ರೋಗಿಗಳು ಸಾಯುವ ಸ್ಥಿತಿಗೆ ತಲುಪಿದ್ದೇವೆ. ಜಗತ್ತಿನಲ್ಲಿ ಎಲ್ಲದರಲ್ಲೂ ಅತಿದೊಡ್ಡ ಸ್ಥಾನ ಹೊಂದಿದ್ದು ಹೇಳುತ್ತೇವೆ. ಆದರೆ ಆಸ್ಪತ್ರೆಗಳಲ್ಲಿ ಕನಿಷ್ಠ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನ ಸಾಯುತ್ತಿದ್ದಾರೆ ಎಂದು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮೂಲಕ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು