ನಬಣ್ಣ ಚಲೋ; ಬಂದೂಕು ಹಿಡಿದುಕೊಂಡು ಬೀದಿಗಿಳಿದಿದ್ದ ಬಿಜೆಪಿ ಕಾರ್ಯಕರ್ತರು!

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಲ್ಕತ್ತಾ(08-10-2020): ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ನಬಣ್ಣ ಚಲೋ ಪ್ರತಿಭಟನೆಯಲ್ಲಿ ಕೇಸರಿ ಪಕ್ಷದ ಕಾರ್ಯಕರ್ತರು ಬಂದೂಕು ಹಿಡಿದುಕೊಂಡು ಬೀದಿಗಿಳಿದಿದ್ದರು ಎಂದು ವರದಿಯಾಗಿದೆ.

ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಪೊಲೀಸರು ಕೇಸರಿ ಪಕ್ಷದ ಕಾರ್ಯಕರ್ತರಿಂದ ಬಂದೂಕು ವಶಪಡಿಸಿಕೊಂಡಿದ್ದಾರೆ. ಬಂದೂಕು ಬಿಜೆಪಿ ಕಾರ್ಯಕರ್ತರ ಕೈಗೆ ಹೇಗೆ ಬಂತು ಎನ್ನುವುದು ತಿಳಿದುಬರಬೇಕಿದೆ.

ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಸಚಿವಾಲಯದ ಕಡೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು