ನಗರಸಭೆ ಚುನಾವಣೆ ಫಲಿತಾಂಶ: ಆಡಳಿತರೂಢ ಬಿಜೆಪಿಗೆ ಮುಖಭಂಗ, 7 ರಲ್ಲಿ ಕಾಂಗ್ರೆಸ್ ಜಯಭೇರಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಏಪ್ರಿಲ್ 20 ರಂದು ನಡೆದ ರಾಜ್ಯದ 10 ನಗರಸಭೆ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತರೂಢ ಬಿಜೆಪಿಗೆ ಭಾರಿ ಮುಖಭಂಗವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಒಲವು ತೋರಿದ್ದಾರೆ.

ರಾಜ್ಯದ 10 ನಗರಸಭೆ ಸ್ಥಳೀಯ ಸಂಸ್ಥೆಗಳ ಪೈಕಿ 7ರಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿದೆ, ಒಟ್ಟು 266 ಸ್ಥಾನಗಳ ಪೈಕಿ 119ರಲ್ಲಿ (45% ಮತ ಪಡೆದು) ಕಾಂಗ್ರೆಸ್ ಪಕ್ಷ ಬಿಜೆಪಿಗೆ ಸಡ್ಡು ಹೊಡೆದಿದೆ. ಬಿಜೆಪಿ 10 ಸ್ಥಾನಗಳ ಕೇವಲ 1ರಲ್ಲಿ ಮಾತ್ರ ಮರು ಆಯ್ಕೆ ಆಗಿದೆ.

ರಾಜ್ಯದಲ್ಲಿ ಬಿಜೆಪಿ ಪಕ್ಷ ನೇತೃತ್ವದ ಸರ್ಕಾರವಿದ್ದರೂ ಜನರು ಬಿಜೆಪಿ ಪಕ್ಷವನ್ನು ತಿರಸ್ಕರಿಸಿದ್ದಾರೆ, ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶವನ್ನು ಸ್ವಾ
ಕಾಂಗ್ರೆಸ್ ಪಕ್ಷದ ನಾಯಕರಾದ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೆವಾಲ್ ಅವರು ಸ್ವಾಗತಿಸಿದ್ದಾರೆ.

ಕರ್ನಾಟಕದ ಮತದಾರರು ಜನಸೇವೆಯ ಮನಸ್ಥಿತಿ ಹಾಗೂ ಬದ್ಧತೆಯನ್ನು ಗುರುತಿಸಿದ್ದಾರೆ. ಮತದಾರರ ತೀರ್ಪಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಅವರು ರಾಜ್ಯದ ಜನತೆಗೆ ಧನ್ಯವಾದಗಳು ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು