ನಾಳೆ ರಾಜ್ಯಕ್ಕೆ ತುರ್ತಾಗಿ 15.25 ಲಕ್ಷ ಡೋಸ್ ಕೊರೊನಾ ಲಸಿಕೆ : ಸಚಿವ ಡಾ.ಸುಧಾಕರ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ ರಾಜ್ಯಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಡೋಸ್ ಕೊರೊನಾ ಲಸಿಕೆಗೆಳು ಬರಲಿವೆ ಎಂದು ಆರೋಗ್ಯ ಸಚಿವ ಡಾ‌.ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕರ್ನಾಟಕಕ್ಕೆ ನಾಳೆ ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ರವಾನೆಯಾಗಲಿದೆ. ಒಂದು ಕಂತಿನಲ್ಲಿ ರಸ್ತೆ ಮೂಲಕ 5,25,500 ಡೋಸ್ ಲಸಿಕೆ ಬೆಳಗಾವಿಗೆ ತಲುಪಲಿದ್ದು, ಮತ್ತೊಂದು ಕಂತಿನಲ್ಲಿ 10,00,000 ಡೋಸ್ ಲಸಿಕೆ ವಿಮಾನದ ಮೂಲಕ ನಾಳೆ ಸಂಜೆ ಬೆಂಗಳೂರು ತಲುಪಲಿದೆ ಎಂದು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಕುರಿತು ಇಂದು ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ರಿಪೋರ್ಟ್ ಕಾರ್ಡ್ ಹೀಗಿದೆ: ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 2787 ಸೇರಿದಂತೆ ರಾಜ್ಯಾಧ್ಯಂತ 4,553 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 10,15,155 ಕ್ಕೆ ಏರಿಕೆಯಾಗಿದೆ.
ಇವರಲ್ಲಿ ಇಂದು 2060 ಸೋಂಕಿತರು ಸೇರಿದಂತೆ ಇದುವರೆಗೆ 9,63,419 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮಾಹಿತಿ ನೀಡಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು