ಈ ವರ್ಷದ ಶೈಕ್ಷಣಿಕ ಕಾರ್ಯಚಟುವಟಿಕೆಗಳು ನಾಳೆಯಿಂದ ಆರಂಭ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: 2021-22 ಶೈಕ್ಷಣಿಕ ವರ್ಷದ ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ನಾಳೆಯಿಂದ ಆರಂಭವಾಗಲಿದೆ.

ಶಾಲೆಗಳಿಗೆ ಮಕ್ಕಳ ಪ್ರವೇಶಾತಿ, ಅಧ್ಯಾಪಕರನ್ನು ಸಜ್ಜುಗೊಳಿಸುವುದು, ವಿವಿಧ ಪಠ್ಯಕ್ರಮಗಳನ್ನು ಬೋಧಿಸಲು ಸಮಯವನ್ನು ನಿಗದಿ ಪಡಿಸುವುದು ಮುಂತಾದ ಕಾರ್ಯಚಟುವಟಿಕೆಗಳು ನಾಳೆಯಿಂದ ಆರಂಭವಾಗಬಹುದು.

ಶಾಲೆ ಆರಂಭಿಸುವ ಪೂರ್ವಭಾವಿ ಸಿದ್ಧತೆಗಳನ್ನು ಜೂನ್ 15 ರಿಂದ 30 ರವರೆಗೆ ಮಾಡಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ (2021-22) ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗಲಿದ್ದು, ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಈಗಾಗಲೇ ಪ್ರಕಟಿಸಿದೆ. 5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಭೌತಿಕ ತರಗತಿ ಬದಲು ಆನ್ಲೈನ್ ಮತ್ತು ಆಫ್ಲೈನ್ ನಲ್ಲಿ ಪಠ್ಯ ಬೋಧನೆ ಮಾಡುವಂತೆ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಕಳೆದ ಬಾರಿಯಂತೆ ಈ ಬಾರಿಯೂ ಆನ್ಲೈನ್ ಮತ್ತು ಆಫ್ಲೈನ್ ತರಗತಿಗಳು ಮುಂದುವರಿಯಲಿವೆ. ಭೌತಿಕ ತರಗತಿಗಳೂ ಇರುವುದಿಲ್ಲ. ದೂರದರ್ಶನ ಚಂದನ ವಾಹಿನಿಯಲ್ಲಿ ಸಂವೇದನಾ ಕಾರ್ಯಕ್ರಮದ ಮೂಲಕ 1662 ವಿಡಿಯೋ ಪಾಠ ಬೋಧನೆ ನಡೆಯಲಿದೆ. ಎಫ್‌ಎಂ ರೇಡಿಯೋದಲ್ಲಿ ಕೂಡಾ ಆಡಿಯೋ ಪಾಠಗಳ ಪ್ರಸಾರ ನಡೆಯಲಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು