ನಾಳೆಯಿಂದ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ನಾಳೆ ರಾಜ್ಯದ ವಿವಿಧ ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆ ದೊರೆತಿದೆ.

ಬಂಗಾಳಕೊಲ್ಲಿಯ ಮೇಲ್ಮೈಯಲ್ಲಿ ಉಂಟಾದ ಸುಂಟರಗಾಳಿಯು ಮಾರ್ಚ್ 29ರಿಂದ ಮಾರ್ಚ್ 31 ವರೆಗಿನ ದಿನಗಳಲ್ಲಿ ಮಳೆ ತರಿಸಲಿದೆಯೆಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಬರಲಿರುವ ಮೂರು ದಿನಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿಗಳಲ್ಲಿ ಮಾರ್ಚ್ 29ರಂದು ಸಾಧಾರಣ ಮಳೆಯಾಗಲಿದೆ.

ಬೇಸಗೆಯಲ್ಲಿ ಉಷ್ಣಾಂಶದಲ್ಲಿ ಹೆಚ್ಚಾಳವಾದಂತೆ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆಯೆಂದು ಪ್ರಕಟಣೆಯಲ್ಲಿ ವಿವರಣೆ ನೀಡಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು