ನಾಳೆಯಿಂದ ದೆಹಲಿಯಲ್ಲಿ ವೀಕೆಂಡ್ ಲಾಕ್ ಡೌನ್ : ಸಿಎಂ ಕೇಜ್ರಿವಾಲ್ ಘೋಷಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ಇದರ ಹೊಡೆತಕ್ಕೆ ದೇಶದ ಹಲವು ರಾಜ್ಯಗಳಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿ ಕೂಡಾ ಕೊರೊನಾ ವೈರಸ್ ಜನರನ್ನು ತತ್ತರಿಸುವಂತೆ ಮಾಡಿದೆ

ಕೋವಿಡ್ ಪರಿಸ್ಥಿತಿ ತಡೆಗಟ್ಟುವ ಹಿನ್ನಲೆಯಲ್ಲಿ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿಡಿಯೋ ಕಾನ್ಫರೆನ್ಸ್ ನಡೆಸುವ ಮೂಲಕ ಮಹತ್ವದ ತೀರ್ಮಾನ ಕೈಗೊಂಡಿದ್ದು, ವೀಕೆಂಡ್‌ ಲಾಕ್‌ ಡೌನ್‌ ಘೋಷಿಸಿದ್ದಾರೆ.

ಶುಕ್ರವಾರ ರಾತ್ರಿ 10 ಗಂಟೆಯಿಂದ ವೀಕೆಂಡ್‌ ಲಾಕ್‌ ಡೌನ್‌ ಜಾರಿಯಾಗಲಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಗೆ ಕೊನೆಗೊಳ್ಳಲಿದೆ. ವೀಕೆಂಡ್‌ ಲಾಕ್‌ ಡೌನ್‌ ಸಂದರ್ಭದಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜಿಮ್, ಮಾಲ್ ಸೇರಿದಂತೆ ಉಳಿದೆಲ್ಲಾ ಸೇವೆಗಳು ಬಂದ್‌ ಆಗಲಿವೆ.

ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಕಾರಣ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ಬೆಡ್‌ ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲು ವೀಕೆಂಡ್‌ ಲಾಕ್‌ ಡೌನ್‌ ತೀರ್ಮಾನಕ್ಕೆ ಬರಲಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು