ಬೆಂಗಳೂರು: “ನನಗೆ ಒಬ್ಬಳೇ ಹೆಂಡ್ತಿ, ಒಂದೇ ಸಂಸಾರ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಗ್ಯ ಸಚಿವ ಡಾ. ಸುಧಾಕರ್ ಅವರಿಗೆ ತಿರುಗೇಟು ನೀಡಿದ್ದಾರೆ.
‘ನಾನೂ ಸೇರಿದಂತೆ ಎಲ್ಲಾ 224 ಶಾಸಕರ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಅವರವರ ಬಂಡವಾಳ ಬಯಲಾಗುತ್ತದೆ’ ಎಂದು ಬೆಂಗಳೂರಿನಲ್ಲಿ ಇಂದು ಆರೋಗ್ಯ ಸಚಿವ ಡಾ.ಸುಧಾಕರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿಕೆ ನೀಡಿದರು.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಿಚಾರ ಚರ್ಚೆಯ ಬೆನ್ನಲ್ಲೇ ಇದೀಗ ಶಾಸಕರ ನೈತಿಕ – ಅನೈತಿಕ ಸಂಬಂಧದ ಕುರಿತು ನೀಡಿದ ಸಚಿವ ಡಾ. ಸುಧಾಕರ್ ಹೇಳಿಕೆಯನ್ನು ರಾಜಕಾರಣದಲ್ಲಿ ಹೊಸ ತಿರುವು ಪಡೆದುಕೊಂಡಿದೆ.
‘ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಯಾರು ಏನೇನು ಮಾಡಿದ್ದರು? ಎಲ್ಲದರ ಬಗ್ಗೆಯೂ ತನಿಖೆಯಾಗಲಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ?’ ಎಂದು ಡಾ.ಕೆ.ಸುಧಾಕರ್ ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿ. ಅವರು ನನಗೆ ಒಬ್ಬಳೇ ಹೆಂಡತಿ, ಒಂದೇ ಸಂಸಾರ, ಸಚಿವ ಡಾ.ಸುಧಾಕರ್ ರಾಜ್ಯದ ಜನರಿಗೆ ಒಳ್ಳೆಯ ನುಡಿಮುತ್ತು ನೀಡಿದ್ದಾರೆ. ಈ ಬಗ್ಗೆ ಸದನದಲ್ಲಿ ಚರ್ಚಿಸುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುಧಾಕರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ‘ನನಗೆ ಒಂದೆಂಡ್ತಿ ಇದ್ದಾಳೆ, ನಾನು ಏಕಪತ್ನಿ ವ್ರತಸ್ಥ, ಬೇಕಾದರೆ ಪ್ರಮಾಣ ಮಾಡಲು ಸಿದ್ಧನಿದ್ದೇನೆ’ ಎಂದು ಶಾಸಕ ಶಿವಲಿಂಗೆಗೌಡರು ಸಚಿವ ಡಾ.ಸುಧಾಕರ್ ಅವರ ಅದೇ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ. ಸಮಾಜಕ್ಕೆ ಇವರೆಲ್ಲರೂ ಕೂಡ ಮಾದರಿಯಾಗಿದ್ದಾರೆ. ಆದರೆ ಇವರೆಲ್ಲರೂ ಕೂಡ ಒಪ್ಪಿಕೊಳ್ಳಲಿ. 224 ಶಾಸಕರ ಬಗ್ಗೆಯೂ ಕೂಡ ತನಿಖೆಯಾಗಲಿ ಎಂದು ಸುಧಾಕರ್ ಅವರ ಆಗ್ರಹ ರಾಜ್ಯ ರಾಜಕಾರಣದಲ್ಲಿ ಹೊಸ ಟ್ವಿಸ್ಟ್ ಗೆ ಕಾರಣವಾಗಿದೆ.