ವಿಶ್ವಾಸ ಮತಯಾಚನೆಯಲ್ಲಿ ಸೋಲು, ಪುದುಚೇರಿ ಕಾಂಗ್ರೆಸ್ ಸರಕಾರ ಪತನ

narayana swami
Share on facebook
Share on twitter
Share on linkedin
Share on whatsapp
Share on telegram
Share on email
Share on print

ಪುದುಚೇರಿ (22-02-2020): ಪುದುಚೇರಿಯಲ್ಲಿ ಕಾಂಗ್ರೆಸ್ ನೇತೃತ್ವದ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಅವರ ಸರಕಾರವು ತಮ್ಮ ಬಹುಮತವನ್ನು ಸದನದ ಮಹಡಿಯಲ್ಲಿ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಪೀಕರ್ ವಿ.ಪಿ.ಶಿವಕೋಝುಂಡು ಘೋಷಿಸಿದ್ದಾರೆ. ಈ ಮೂಲಕ ಕಳೆದ ಕೆಲ ದಿನಗಳಿಂದ ಪುದುಚೇರಿಯಲ್ಲಿ ಶಾಸಕರ ರಾಜೀನಾಮೆಯಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದೆ.

ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ತಮ್ಮ ಸರ್ಕಾರವನ್ನು ಉರುಳಿಸಲು ಪ್ರತಿಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ನಾರಾಯಣ ಸ್ವಾಮಿ ಹೇಳಿಕೆಯನ್ನು ನೀಡಿದ್ದಾರೆ.

ನಾವು ಡಿಎಂಕೆ ಮತ್ತು ಸ್ವತಂತ್ರ ಶಾಸಕರ ಬೆಂಬಲದೊಂದಿಗೆ ಸರ್ಕಾರವನ್ನು ರಚಿಸಿದ್ದೇವೆ. ಅದರ ನಂತರ, ನಾವು ವಿವಿಧ ಚುನಾವಣೆಗಳನ್ನು ಎದುರಿಸಿದ್ದೇವೆ. ನಾವು ಎಲ್ಲಾ ಉಪಚುನಾವಣೆಗಳಲ್ಲಿ ಗೆದ್ದಿದ್ದೇವೆ. ಪುದುಚೇರಿಯ ಜನರು ನಮ್ಮನ್ನು ನಂಬುತ್ತಾರೆ ಎಂಬುದು ಸ್ಪಷ್ಟವಾಗಿದೆ ಎಂದು ನಾರಾಯಣ ಸ್ವಾಮಿ ಹೇಳಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು