ಕಾಶಿ ಕಾರಿಡಾರ್ ಇಂದು ಉಧ್ಘಾಟನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕಾಶಿ: ಗಂಗಾ ಹಾಗೂ ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಕಾಶಿ ವಿಶ್ವನಾಥ ಕಾರಿಡಾರನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆ ಕಾಶಿ ದೀಪಾಲಂಕೃತಗೊಂಡು ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ.

ಉದ್ಘಾಟನೆಯ ಅಂಗವಾಗಿ  ‘ದಿವ್ಯ ಕಾಶಿ ಭವ್ಯ ಕಾಶಿ’ ಎಂಬ ಹೆಸರಿನಲ್ಲಿ  ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದ್ದು ಇದಕ್ಕೆ ಬಿಜೆಪಿ ಆಡಳಿತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ.  ಉತ್ತರ ಪ್ರದೇಶ ಚುನಾವಣೆಯ ಹೊಸ್ತಿಲಲ್ಲೇ ಕಾರ್ಯಕ್ರಮ ನಡೆಯುತ್ತಿರುವುದರಿಂದ ಮಹತ್ವ ಪಡೆದುಕೊಂಡಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು