ಬಂಟ್ವಾಳ(19-10-2020): ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೋರ್ವನನ್ನು ಯುವಕರ ತಂಡ ರಕ್ಷಿಸಿದ ಘಟನೆ ಪಾಣೆಮಂಗಳೂರಿನ ಹಳೆ ಸೇತುವೆಯಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸದ್ಯ ಯುವಕನಿಗೆ ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಳಿಗ್ಗೆ 8 ಗಂಟೆಗೆ ಖಾಕಿ ಸಮವಸ್ತ್ರ ಧರಿಸಿಕೊಂಡು ಯುವಕ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಈಜುಗಾರ ಮಹಮ್ಮದ್ ಅವರ ಮೂಲಕ ರಕ್ಷಣೆಯನ್ನು ಮಾಡಿದ್ದಾರೆ. ಯುವಕನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.