ಕೋಮುವಾದ ಪ್ರಚಾರಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಸ್ತ್ರವಾಗಿ ಬಳಸಲಾಗುತ್ತದೆ-ರಾಹುಲ್ ಗಾಂಧಿ

raul gandhi
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(28-02-2021): ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೋಮುವಾದ ಮತ್ತು ನಿರ್ದಿಷ್ಟ ಸಿದ್ಧಾಂತವನ್ನು ಭಾರತೀಯ ಸಮಾಜಕ್ಕೆ ಪ್ರಸರಣ ಮಾಡಲು ಮೋದಿ ಸರ್ಕಾರ ಅಸ್ತ್ರವಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ.

ತಮಿಳುನಾಡಿನ ತಿರುನೆಲ್ವೇಲಿಯ ಸೇಂಟ್ ಕ್ಸೇವಿಯರ್ಸ್ ಕಾಲೇಜಿನಲ್ಲಿ ಕಾಲೇಜು ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸದೆ ಶಿಕ್ಷಣ ನೀತಿಯನ್ನು ಕಲುಷಿತಗೊಳಿಸಲಾಗಿದೆ.

ಶಿಕ್ಷಣ ವ್ಯವಸ್ಥೆ ನಮ್ಮ ವಿದ್ಯಾರ್ಥಿಗಳಿಗಾಗಿ ನಮ್ಮ ಶಿಕ್ಷಕರು ನಡೆಸುತ್ತಾರೆ. ನಾವು ಶಿಕ್ಷಣ ವ್ಯವಸ್ಥೆಗೆ ಯಾವುದೇ ನೀತಿಯನ್ನು ರೂಪಿಸುವುದಿದ್ದರೆ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರೊಂದಿಗಿನ ಸಂಭಾಷಣೆಯಿಂದ ಬರಬೇಕಾಗಿದೆ. ದುರದೃಷ್ಟವಶಾತ್, ಇದನ್ನು ಮಾಡಲಾಗಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಮಾತನಾಡಿದ ಅವರು, ಒಂದು ಸಂಸ್ಥೆಯಲ್ಲಿ (ಎನ್‌ಇಪಿಯಲ್ಲಿ) ಹೆಚ್ಚಿನ ಶಕ್ತಿಯನ್ನು ಕೇಂದ್ರೀಕರಿಸಲಾಗುತ್ತಿದೆ. ಇದು ಶಿಕ್ಷಣ ವ್ಯವಸ್ಥೆಯನ್ನು ಹಾನಿಗೊಳಿಸಲಿದೆ. ಎನ್ ಇಪಿಯನ್ನು ನಿರ್ದಿಷ್ಟ ಸಿದ್ಧಾಂತವನ್ನು ಭಾರತೀಯ ಸಮಾಜಕ್ಕೆ ತಳ್ಳಲು ಒಂದು ಆಯುಧವನ್ನಾಗಿ ಬಳಸಲಾಗುತ್ತದೆ ಎಂದು ಹೇಳಿದ್ದಾರೆ.

 

 

 

 

 

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು