ಬೆಂಗಳೂರು(23/10/2020): ಪ್ರಚೋದನಕಾರಿ ಪೋಸ್ಟ್ ಹಾಕಿ ನಾನು ತಪ್ಪು ಮಾಡಿದ್ದೇನೆ. ಅದಕ್ಕಾಗಿ ಕ್ಷಮೆ ಯಾಚಿಸುತ್ತೇನೆ ಎಂದು ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಗೆ ಕಾರಣವಾಗಿದ್ದ ಪ್ರಚೋದನಕಾರಿ ಪೋಸ್ಟ್ ಹಾಕಿ ಜೈಲು ಸೇರಿದ್ದ ನವೀನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಾಗೆ ಪೋಸ್ಟ್ ಮಾಡಿದ್ದು ತಪ್ಪು. ನಾನದನ್ನು ಒಪ್ಪಿಕೊಳ್ಳುತ್ತೇನೆ. ನನ್ನಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಆದ್ದರಿಂದ ನಾನು ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.