ಬೆಂಗಳೂರು(22/10/2020): ಪ್ರವಾದಿ ಮುಹಮ್ಮದರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿ, ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಗಲಭೆಗೆ ಕಾರಣನಾಗಿದ್ದ ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಳಿಯ ಆರೋಪಿ ನವೀನ್ ಗೆ ಹೈಕೋರ್ಟ್ ಜಾಮೀನು ನೀಡಿದೆ.
ನವೀನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿದ ಬಿ.ಎ.ಪಾಟೀಲ್, ಆರೋಪಿಯ ಜೀವಕ್ಕೆ ಅಪಾಯ ಇದೆ ಎನ್ನುವ ಕಾರಣಕ್ಕೆ ಜಾಮೀನು ನೀಡದೆ ಇದ್ದರೆ ಅದು ಆತನ ಹಕ್ಕನ್ನು ಮೊಟಕುಗೊಳಿಸಿದಂತಾಗುತ್ತದೆ ಎಂದು ಜಾಮೀನು ಮಂಜೂರು ಮಾಡಿರುವುದಾಗಿ ತೀರ್ಪು ಪ್ರಕಟಿಸಿದರು.