NEET ಪರೀಕ್ಷೆಗೆ ದಿನಾಂಕ ಫಿಕ್ಸ್:

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್ )ಗೆ ದಿನಾಂಕ ನಿಗಧಿಯಾಗಿದ್ದು, ಆಗಸ್ಟ್ 1ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಶುಕ್ರವಾರ ಪ್ರಕಟಿಸಿದೆ.

ಪರೀಕ್ಷೆ ಕುರಿತು ಸಂಸ್ಥೆ ಪ್ರಕಟಣೆ ಹೊರಡಿಸಿದ್ದು, “ನೀಟ್ (ಯುಜಿ) 2021ನ್ನು ಪೆನ್ ಮತ್ತು ಪೇಪರ್ ಮೋಡ್ ಮೂಲಕ ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ 11 ಭಾಷೆಗಳಲ್ಲಿ ನಡೆಸಲಾಗುವುದು” ಎಂದು ತಿಳಿಸಿದೆ.

ಆನ್ಲೈನ್ʼನಲ್ಲಿ ಪರೀಕ್ಷೆ ನಡೆಸಲು ಸರ್ಕಾರ ಚಿಂತನೆ ನಡೆಸಿತ್ತಾದರೂ ಈ ವರ್ಷ ಪೆನ್ ಮತ್ತು ಪೇಪರ್ ಮೋಡ್ʼನಲ್ಲಿ ಮುಂದುವರಿಯಲು ನಿರ್ಧರಿಸಿದೆ.

ಎಂಬಿಬಿಎಸ್, ಬಿಡಿಎಸ್, ಬಿಎಎಂಎಸ್, ಬಿಎಸ್ ಎಂಎಸ್, ಬಿಎಂಎಸ್, ಬಿಎಚ್ ಎಂಎಸ್ ಸೇರಿದಂತೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ʼಗಳ ಪ್ರವೇಶಕ್ಕಾಗಿ ನೀಟ್ ಯುಜಿ ನಡೆಸಲಾಗುತ್ತದೆ.

“ನೀಟ್ʼನ ಫಲಿತಾಂಶವನ್ನ ರಾಜ್ಯ/ಕೇಂದ್ರ ಸರ್ಕಾರಿ ಕಾಲೇಜುಗಳ ಇತರ ಸಂಸ್ಥೆಗಳು B.Sc ನರ್ಸಿಂಗ್ ಮತ್ತು B.Sc ಲೈಫ್ ಸೈನ್ಸ್ ಪ್ರವೇಶಕ್ಕೆ ಬಳಸಿಕೊಳ್ಳಬಹುದು” ಎಂದು ಎನ್ ಟಿಎ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಅಂದ್ಹಾಗೆ, ಪ್ರತಿ ವರ್ಷ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯುತ್ತಾರೆ. ನೀಟ್ 2020ಕ್ಕೆ 16 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಸಿದ್ದು, ಅವರಲ್ಲಿ 13.5 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು