ಹೊಸ ಸ್ವರೂಪದ ವೈರಸ್: ಕೇಂದ್ರಗಳಿಂದ ರಾಜ್ಯಗಳಿಗೆ ಮಹತ್ವದ ಸೂಚನೆ ರವಾನೆ

covid vachin
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(26-12-2020): ಹೊಸ ಸ್ವರೂಪದ ಕೊರೊನಾ ವೈರಸ್ ಬಗ್ಗೆ ರಾಜ್ಯ ಸರಕಾರಗಳು ಯಾವುದೇ ಹೇಳಿಕೆಯನ್ನು ನೀಡಬಾರದೆಂದು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಹೊಸ ಮಾದರಿಯ ಸೋಂಕು ಪತ್ತೆಯಾದಲ್ಲಿ ತಕ್ಷಣವೇ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ ಗೆ ರಕ್ತದ ಮಾದರಿಯನ್ನು ಕಳುಹಿಸಿಕೊಡಬೇಕೆಂದು ಸೂಚನೆ ನೀಡಲಾಗಿದೆ.

ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರು, ಮುಖ್ಯ ಕಾರ್ಯದರ್ಶಿಗಳು ಹಾಗೂ ಇಲಾಖೆ ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಈ ಸೂಚನೆಯನ್ನು ನೀಡಿದ್ದಾರೆ. ಕೇಂದ್ರದಿಂದ ಸೂಚನೆ ಬಂದಿರುವ ಬಗ್ಗೆ ಸಚಿವ ಡಾ. ಸುಧಾಕರ್ ಖಚಿತಪಡಿಸಿದ್ದಾರೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು