ಬೆಂಗಳೂರು(31-12-2020): ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯನ್ನು ತಡೆಯಲು ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಯಿಂದಲೇ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೆ ಬರಲಿದ್ದು, ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಮಂಗಳೂರಿನಲ್ಲಿ ಸಂಜೆ 6ರಿಂದ ನಾಳೆ ಬೆಳಗ್ಗೆ ಆರು ಗಂಟೆಯವರೆಗೆ ನಿಷೇಧಾಜ್ಞೆ ಹೇರಲಾಗಿದೆ.
ಬೆಂಗಳೂರಿನ 15 ಕಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ರಾತ್ರಿ ಹತ್ತು ಗಂಟೆಯ ನಂತರ ನಗರದ ಮೇಲ್ಸೇತುವೆಗಳು ಬಂದ್ ಆಗಿರಲಿದೆ. ಪ್ರಮುಖ ರಸ್ತೆಗಳು ಬಂದ್ ಮಾಡಲಾಗಿದೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಮಾರ್ಗೋಸ್ ರೋಡ್, ರೆಸಿಡೆನ್ಸಿ ರೋಡ್, ಇಂದಿರಾ ನಗರ ರೋಡ್, ಕಬ್ಬನ್ ಪಾರ್ಕ್ ರೋಡ್ ಸೇರಿ 15 ಕಡೆ ನಿರ್ಬಂಧ ಹೇರಲಾಗಿದೆ.