ಮಂಗಳೂರು ಮಸೀದಿಯ‌ ಕಂಪೌಂಡ್ ಹಾರಿ ಹರಕೆ ಡಬ್ಬಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಜಪ್ಪು ಮುಹಿಯ್ಯುದ್ದೀನ್ ಜುಮ್ಹಾ ಮಸೀದಿಯಲ್ಲಿ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಡ ರಾತ್ರಿ ವ್ಯಕ್ತಿಯೋರ್ವ ಮಸೀದಿ ಗೇಟನ್ನು ಹಾರಿ ಮಸೀದಿ ಆವರಣ ಪ್ರವೇಶಿಸಿ ಅಲ್ಲಿದ್ದ ಕಾಣಿಕೆ ಡಬ್ಬಿ ಕಳವು ಮಾಡಿದ್ದಾನೆ. ಕೃತ್ಯದ ದೃಶ್ಯಗಳು ಮಸೀದಿಯಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳತನದ ಬಗ್ಗೆ ಮಸೀದಿ ಆಡಳಿತ ಮಂಡಳಿ ಕಾರ್ಯದರ್ಶಿ ಮುಝಮ್ಮಿಲ್ ಹುಸೈನ್ ಕೇಸ್ ದಾಖಲಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೈಸೂರು, ತುಮಕೂರು, ಹಾಸನದಲ್ಲಿ ಕೊರೋನಾ ಬಿಗ್ ಬ್ಲಾಸ್ಟ್: ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 50,210 ಜನರಿಗೆ ಕೊರೊನಾ ಸೋಂಕು ತಗುಲಿದೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. 22,842 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 35,17,682 ಕ್ಕೆ ಏರಿಕೆಯಾಗಿದೆ. ಇದುವರೆಗೆ 31,21,274 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 38,582 ಜನ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,57,796 ಕ್ಕೆ ಏರಿಕೆಯಾಗಿದ್ದು, ಪಾಸಿಟಿವಿಟಿ ದರ ಶೇಕಡ 22.77 ರಷ್ಟು ಇದೆ. ಜಿಲ್ಲಾವಾರು ಮಾಹಿತಿ: ಬಳ್ಳಾರಿ 904, ಬೆಳಗಾವಿ 885, ಬೆಂಗಳೂರು ಗ್ರಾಮಾಂತರ 925, ದಕ್ಷಿಣಕನ್ನಡ 770, ಧಾರವಾಡ … Read more

ರಾಜ್ಯದಲ್ಲಿ ಇಂದು 42,470 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 19.33%

ರಾಜ್ಯದಲ್ಲಿ ಇಂದು ಹೊಸದಾಗಿ 42,470 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇಂದು 26 ಮಂದಿ ಬಲಿಯಾಗಿದ್ದಾರೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರಿನಲ್ಲಿ 17,266 ಸೇರಿದಂತೆ ರಾಜ್ಯಾಧ್ಯಂತ 42,470 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ತಿಳಿಸಿದ್ದಾರೆ. ಪಾಸಿಟಿವಿಟಿ ದರ 19.33%ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 35,140 ಜನರು ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಯುವ ಕಾಂಗ್ರೆಸ್ ನಾಯಕಿಗೆ ಚೂರಿ ಇರಿತ.

ಉಡುಪಿ : ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ಮಾಡಿದ್ದಾನೆ. ಕಳೆದ ರಾತ್ರಿ ಮನೆ ಪಕ್ಕದಲ್ಲಿ ರೀನಾ ಡಿಸೋಜಾ ಅವರು ತನ್ನ ಗೆಳತಿ ಜೊತೆ ಮಾತನಾಡುತ್ತಿದ್ದಾಗ, ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಜಗಳಕ್ಕಿಳಿದಿದ್ದಾನೆ. ಮಾತಿನ ಚಕಮಕಿ ನಡೆಯುವ ಸಂದರ್ಭದಲ್ಲಿ ನೇರವಾಗಿ ರೀನಾ ಅವರಿಗೆ ಚಾಕು ಇರಿದಿದ್ದಾನೆ. ಕೂಡಲೇ ಸ್ಥಳೀಯರು ರೀನಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. … Read more

ಸಯ್ಯದ್ ಮೋದಿ ಇಂಟರ್ ನ್ಯಾಷನಲ್ ಬ್ಯಾಡ್ಮಿಂಟನ್ ಟೂರ್ನಿ: ಸಿಂಗಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಿಂಧು

ಲಕ್ನೋ: ಎರಡು ಬಾರಿ ಒಲಿಂಪಿಕ್ಸ್ ಪದಕ ಜಯಿಸಿರುವ ಪಿವಿ ಸಿಂದು ಯುವ ಸಹ ಆಟಗಾರ್ತಿ ಮಾಳವಿಕಾ ಬಾನ್ಸೋಡ್ ರನ್ನು ನೇರ ಗೇಮ್ಗಳ ಅಂತರದಿಂದ ಮಣಿಸುವ ಮೂಲಕ ಸಯ್ಯದ್ ಮೋದಿ ಇಂಟರ್ ನ್ಯಾಷನಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಆದಿತ್ಯವಾರ ಕೇವಲ 35 ನಿಮಿಷಗಳಲ್ಲಿ ಅಂತ್ಯಗೊಂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತೆ ಸಿಂಧು ಎದುರಾಳಿ ಮಾಳವಿಕಾ ರನ್ನು 21-13, 21-16 ಅಂತರದಿಂದ ಸುಲಭವಾಗಿ ಮಣಿಸಿದರು. ಮಾಜಿ ವಿಶ್ವ ಚಾಂಪಿಯನ್ ಸಿಂಧು ಎರಡನೇ ಬಾರಿ ಸಯ್ಯದ್ … Read more

ರಾಯಚೂರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ರಾಯಚೂರು: ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಜಿಲ್ಲೆ ಈಗ ಪೌಷ್ಟಿಕ ವಿಚಾರದಲ್ಲಿ ಪ್ರಗತಿ ಸಾಧಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು ಶೇ70 ಪ್ರತಿಶತದಷ್ಟು ಇದ್ದ ಪೌಷ್ಟಿಕತೆ ಈಗ ಶೇ 97 ಪ್ರತಿಶತದಷ್ಟಾಗಿದೆ. ಇದಕ್ಕೆ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿ ಹಾಗೇ ಹಾಲಿ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್‌ರನ್ನೂ ಪ್ರಧಾನಿ ಶ್ಲಾಘಿಸಿದರು. ಜಿಲ್ಲೆಯು ಅಪೌಷ್ಟಿಕತೆ ವಿಚಾರದಲ್ಲಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, 5 ವರ್ಷದ ಒಳಗಿನ ಮಕ್ಕಳು ಅಪೌಷ್ಟಿಕತೆಯಿಂದ ಈಗಲೂ ಸಾವನ್ನಪ್ಪುತ್ತಿದ್ದಾರೆ. … Read more

ಎಸ್‌ ಎಸ್‌ ಎಲ್ ಸಿ ಪರೀಕ್ಷೆ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ. ಕಳೆದ … Read more

ತಮಿಳುನಾಡಿನಲ್ಲಿ ನಾಳೆ ಸಂಪೂರ್ಣ ಲಾಕ್ಡೌನ್.

ಚೆನೈ:covid -19 ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ಸರ್ಕಾರ ಶುಕ್ರವಾರ ಜನವರಿ 23 ರಂದು ಸಂಪೂರ್ಣ ಲಾಕ್‌ಡೌನ್ ಘೋಷಿಸಿತು. ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ ಎಂದು IANS ವರದಿ ಮಾಡಿದೆ.ಭಾನುವಾರದ lockdown ಸಮಯದಲ್ಲಿ ಆಹಾರ ವಿತರಣೆ ಸೇರಿದಂತೆ ಅಗತ್ಯ ಸೇವೆಗಳನ್ನು ಮಾತ್ರ ಅನುಮತಿಸಲಾಗುತ್ತದೆ. ರೈಲು ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಿಗೆ ಆಗಮಿಸುವ ಜನರು ಆಟೋ-ರಿಕ್ಷಾಗಳು, ಕರೆ ಟ್ಯಾಕ್ಸಿಗಳು ಮತ್ತು ಇತರ ವಾಹನಗಳನ್ನು … Read more

ಬೆಲೆ ಏರಿಕೆ ಭೀತಿಯಲ್ಲಿದ್ದ ಜನರಿಗೆ ಭರ್ಜರಿ ಶುಭ ಸುದ್ದಿ

ಬೆಂಗಳೂರು: ಬೆಲೆ ಏರಿಕೆ ಬಿಸಿ ಮತ್ತೆ ಸಾರ್ವಜನಿಕರಿಗೆ ತಟ್ಟಲಿದೆಯೇ ಎಂಬ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಜನರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸಧ್ಯಕ್ಕೆ ಬೆಲೆ ಏರಿಕೆಯ ನಿರ್ಧಾರ ಇಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಹಾಲು, ನೀರು, ವಿದ್ಯುತ್ ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾಪ ಬಂದಿದೆ. ಆಡಳಿತದಲ್ಲಿ ದರ ಏರಿಕೆ ಪ್ರಸ್ತಾಪ ಬರುವುದು ಸಹಜ. ಆದರೆ ದರ ಏರಿಕೆ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ ಎಂದರು. ಅವಸರದ … Read more

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಹೆಚ್.ಡಿ.ದೇವೇಗೌಡರಿಗೆ ಕೊವೀಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಸದ್ಯ ದೇವೇಗೌಡರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಕುರಿತು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.