ಬೆಂಗಳೂರು(19-11-2020): ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್ಡಿಪಿಐ) 43 ಕ್ಕೂ ಹೆಚ್ಚು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶೋಧನೆ ನಡೆಸಿದೆ ಎಂದು ಇಂಡಿಯಾ ಟಿವಿ ವರದಿ ಮಾಡಿದೆ.
ಆಗಸ್ಟ್ 11 ರಂದು ಬೆಂಗಳೂರನ್ನು ಬೆಚ್ಚಿಬೀಳಿಸಿದ ಗಲಭೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಒಟ್ಟು 43 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಎನ್ಐಎ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಎಸ್ಡಿಪಿಐ ಕೈವಾಡ ಸೇರಿದಂತೆ ಬೆಂಗಳೂರು ಗಲಭೆಗೆ ಸಂಬಂಧಿಸಿದ ಎರಡು ಪ್ರಕರಣಗಳನ್ನು ಎನ್ಐಎ ತನಿಖೆ ನಡೆಸುತ್ತಿದೆ.
ಆಗಸ್ಟ್ 11 ರಂದು ಕಾಂಗ್ರೆಸ್ ಶಾಸಕ ಆರ್.ಅಖಂಡ ಶ್ರೀನಿವಾಸ ಮೂರ್ತಿಯ ಸೋದರಳಿಯ ನವೀನ್ ಕುಮಾರ್ ಪ್ರವಾದಿಯನ್ನು ನಿಂದಿಸಿ ಫೇಸ್ಬುಕ್ ಪೋಸ್ಟ್ ಹಾಕಿದ್ದ ಬಳಿಕ ಪ್ರತಿಭಟನೆ ನಡೆದು ಬಳಿಕ ಘಟನೆ ಹಿಂಸೆಗೆ ತಿರುಗಿತ್ತು.
ಇನ್ನು ಎನ್ಐಎಗೆ ಸಮಾನಾಂತರವಾಗಿ ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಬೆಂಗಳೂರು ಮೇಯರ್ ಆರ್.ಸಂಪತ್ ರಾಜ್ ಅವರನ್ನು ಬಂಧಿಸಿದ್ದಾರೆ.