ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ? ಡಾ.ಕೆ. ಸುಧಾಕರ್ ಹೇಳಿದ್ದೇನು?

dr.sudhakar
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(04-12-2020): ಹೊಸವರ್ಷಾಚರಣೆಗೆ ಬ್ರೇಕ್ ಹಾಕಲು ಮತ್ತು 2ನೇ ಅಲೆಯ ಕೋವಿಡ್ ತಡೆಯುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿ. 26 ರಿಂದ ಜ.1ರ ವರೆಗೆ ನೈಟ್ ಕರ್ಪ್ಯೂ ವಿಧಿಸುವ ಸಾಧ್ಯತೆ ಇದೆ.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಈ ಕುರಿತು ಸರಕಾರಕ್ಕೆ ಶಿಫಾರಸು ಮಾಡಿದ್ದು, ಈ ಕುರಿತು ಆರೋಗ್ಯ ಇಲಾಖೆ ಇಂದು ಮಹತ್ವದ ಸಭೆ ನಡೆಸಲಿದೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನ ಬಗ್ಗೆ ಚರ್ಚೆ ನಡೆಸಲಾಗುವುದು. ಸಿಎಂ ಅಂತಿಮವಾಗಿ ಈ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು