ನಿಂದನಾತ್ಮಕ ಹೇಳಿಕೆ ನೀಡಿರುವ ಸಚಿವ ಡಾ.ಸುಧಾಕರ್ ವಿರುದ್ದ ಪ್ರತ್ಯೇಕವಾಗಿ ಮಾನನಷ್ಟ ಮೊಕದ್ದಮೆ ಹಾಕಲು ನಿರ್ಧಾರ : ವಿಪಕ್ಷ ನಾಯಕ ಸಿದ್ದರಾಮಯ್ಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಸಚಿವ ಡಾ.ಸುಧಾಕರ್ ನೀಡಿರುವ ಉದ್ದಟತನದ ಹೇಳಿಕೆಯಿಂದ ವಿಧಾನಸಭಾ ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿಯವರಿಗೆ ಸಂಬಂಧಿಸಿದ ಸಿಡಿ ಹಗರಣದ ಜೊತೆ ಈ ಆರೋಪದ ಬಗ್ಗೆಯೂ ಹೈಕೋರ್ಟ್ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗ ಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕಾನೂನಿನ ಹೋರಾಟದ ಮೂಲಕ ಈ ಪ್ರಕರಣವನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದೇವೆ. ಇಂತಹ ನಿಂದನಾತ್ಮಕ ಹೇಳಿಕೆ ನೀಡಿರುವ ಸಚಿವ ಡಾ.ಸುಧಾಕರ್ ವಿರುದ್ದ ಪ್ರತ್ಯೇಕವಾಗಿ ಮಾನನಷ್ಟ ಮೊಕದ್ದಮೆ ಹಾಕಬೇಕು ಎಂದು ಕೆಲವು ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತೇವೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದೆ ನಾವು ಬಿಡುವುದಿಲ್ಲ.

ಸುಧಾಕರ್ ಒಬ್ಬ ಸಾಮಾನ್ಯ ವ್ಯಕ್ತಿ ಅಲ್ಲ, ಅವರೊಬ್ಬ ಜನಪ್ರತಿನಿಧಿ ಮತ್ತು ಸಚಿವ. ಇಂತಹವರು ನಾಲಿಗೆ ಸಡಿಲು ಬಿಟ್ಟು ಬೇರೆ ಜನಪ್ರತಿನಿಧಿಗಳನ್ನು ನಿಂದಿಸಿರುವುದು ಸ್ಪಷ್ಟವಾಗಿ ಸದಸ್ಯರ ವಿಶೇಷ ರಕ್ಷಣೆಯ (Privilage) ಉಲ್ಲಂಘಣೆಯಾಗಿದೆ. ಸುಧಾಕರ್ ಸ್ಥಿತಿ ತಾ ಕಳ್ಳ ಇತರರನ್ನು ನಂಬ ಎಂಬಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಚಿವ ಡಾ‌. ಸುಧಾಕರ ವಿರುದ್ಧ ಗಂಭೀರವಾಗಿ ಆರೋಪಿಸಿದ್ದಾರೆ.

ಪುರುಷಪ್ರಧಾನ ಸಮಾಜದಲ್ಲಿ ಪುರುಷ ಶಾಸಕರು ಇಂತಹ ಆರೋಪಗಳನ್ನು ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲರು. ಆದರೆ ಮಹಿಳಾ ಶಾಸಕರಿಗೆ ಇಂತಹ ಸುಳ್ಳು ಆರೋಪಗಳು ಬಹಳ ಹಾನಿ ಉಂಟುಮಾಡುತ್ತದೆ. ಅವರು ಮನೆಯಲ್ಲಿ ಕುಟುಂಬದವರನ್ನು ಹೇಗೆ ಎದುರಿಸಬೇಕು? ಇಂತಹ ಕೀಳು ಮನಸ್ಸಿನ ಪುರುಷ ರಾಜಕಾರಣಿಗಳ ಕಾರಣದಿಂದಾಗಿಯೇ ರಾಜಕೀಯ ಪ್ರವೇಶಕ್ಕೆ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು