ಉಪ ಚುನಾವಣೆ; ಎರಡನೇ ಬಾರಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ

nomination
Share on facebook
Share on twitter
Share on linkedin
Share on whatsapp
Share on telegram
Share on email
Share on print

ತುಮಕೂರು(15/10/2020): ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಿದರು.  ಚುನಾವಣಾಧಿಕಾರಿ ಡಾ.ನಂದಿನಿದೇವಿ ಅವರು ಸ್ವೀಕರಿಸಿದರು.

ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜತೆಯಲ್ಲಿದ್ದರು.

ಈ ಮೊದಲು ಜಯಚಂದ್ರ ಅವರು ನಾಮಪತ್ರ ಸಲ್ಲಿಸಿದ್ದರು. ಇಂದು ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ ಏರ್ಪಡಿಸಲಾಗಿತ್ತು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು