ಅಕ್ಟೋಬರ್ 25 ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ : ರಾಜ್ಯ ಸರ್ಕಾರ ಆದೇಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೋವಿಡ್ ಕಾರಣದಿಂದ ದೀರ್ಘ ಅವಧಿಯಿಂದ ಬಂದ್ ಆದ ಕಿರಿಯ ಪ್ರಾಥಮಿಕ ಶಾಲೆಗಳ ಪುನಾರಂಭಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯದಲ್ಲಿ ಕಿರಿಯ ಪ್ರಾಥಮಿಕ ಶಾಲಾ ತರಗತಿಗಳನ್ನು (1ರಿಂದ 5) ಇದೇ ಅಕ್ಟೋಬರ್ 25 ರಿಂದ ಆರಂಭಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಸಂಬಂಧ ಮಾರ್ಗಸೂಚಿ ಹೊರಡಿಸಲಾಗಿದ್ದು, ಕೋವಿಡ್‌ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಪ್ರಾಥಮಿಕ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದೆ.

ತರಗತಿಯಲ್ಲಿ ಶೇ.50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುವುದು,ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು. ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದಸರಾ ನಂತರ ಕಿರಿಯ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು. ಇದೀಗ ಕೋವಿಡ್‌ ತಾಂತ್ರಿಕ ತಜ್ಞರ ಸಮಿತಿ ಶಾಲೆ ಆರಂಭಿಸಲು ಒಪ್ಪಿಗೆ ನೀಡಿದೆ. ಜಿಲ್ಲೆಗಳಲ್ಲಿ ಮತ್ತು ಗಡಿ ಭಾಗಗಳಲ್ಲಿ ಸದ್ಯದ ಕೋವಿಡ್‌ ದೃಢ ಪ್ರಮಾಣವನ್ನು ಅವಲೋಕಿಸಿದ ಬಳಿಕ ಪ್ರಾಥಮಿಕ ಹಂತದಿಂದಲೇ ಶಾಲೆಗಳನ್ನು ಆರಂಭಿಸಲು ಕೋವಿಡ್ ಸಲಹಾ ಸಮಿತಿ ಅನುಮತಿ ನೀಡಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ದಸರಾ ನಂತರ ಬಿಸಿಯೂಟ ಆರಂಭಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಸಚಿವರು ಆದೇಶಿಸಿದ್ದಾರೆ. ಹಾಗೂ ಶಾಲೆ ಆರಂಭಿಸುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಖಚಿತಪಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು