100 ರ ಗಡಿ ದಾಟಿದ ಒಮಿಕ್ರಾನ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಭಾರತದಲ್ಲಿ ಒಮೈಕ್ರಾನ್ ಪ್ರಕರಣಗಳು 100ರ ಗಡಿ ದಾಟಿದ್ದು, ಕೇಂದ್ರ ಸರ್ಕಾರ ರಾಜ್ಯವಾರು ಪಟ್ಟಿ ಬಿಡುಗಡೆ ಮಾಡಿದೆ. ಈವರೆಗೆ ದೇಶದಲ್ಲಿ 101 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ತಿಳಿಸಿದೆ. 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಮೈಕ್ರಾನ್ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 32 ಪ್ರಕರಣಗಳು ದೃಢಪಟ್ಟಿವೆ. ದೆಹಲಿಯಲ್ಲಿ 22, ರಾಜಸ್ಥಾನದಲ್ಲಿ 17, ಕರ್ನಾಟಕ ಹಾಗೂ ತೆಲಗಾಂಣದಲ್ಲಿ ತಲಾ 8, ಗುಜರಾತ್ ಮತ್ತು ಕೇರಳದಲ್ಲಿ ತಲಾ 5, ಆಂಧ್ರಪ್ರದೇಶ, ಚಂಢೀಗಡ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು