ಮಂಗಳೂರಿನಲ್ಲಿ ಮೃತಪಟ್ಟಿದ್ದ ವ್ಯಕ್ತಿ ಉಪ್ಪಳ ತಲುಪಿದಾಗ ಜೀವಂತ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬದಿಯಡ್ಕ ನಿವಾಸಿಯೋರ್ವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದು ಮೃತಪಟ್ಟಿದ್ದಾರೆ ಎಂದು ಖಚಿತ ಪಡಿಸಿ ಮನೆಯವರಿಗೆ ಬಿಟ್ಟು ಕೊಟ್ಟಿದ್ದು, ಆ ವ್ಯಕ್ತಿಯು ಮಾರ್ಗ ಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ನಡೆದಿದೆ.

ತೀವ್ರ ಅಸೌಖ್ಯದ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರಾದ ಗುರುವ (60) ಎಂಬವರನ್ನು ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, ರೋಗಿಯು ಆಕ್ಸಿಜನ್ ಸಹಾಯದಿಂದ ಮಾತ್ರ ಉಸಿರಾಡುತ್ತಿದ್ದು, ಆಕ್ಸಿಜನ್ ತೆಗೆದರೆ ಪ್ರಾಣ ಹೋಗುತ್ತದೆ ಎಂದು ಹೇಳಿದ್ದರು. ಅದರಂತೆ ಆಕ್ಸಿಜನ್ ತೆರವುಗೊಳಿಸಲಾಗಿತ್ತು.

ಬಳಿಕ ಮನೆಗೆ ಫೋನ್ ಮಾಡಿ ಅಂತ್ಯಸಂಸ್ಕಾರಕ್ಕೆ ಚಿತೆ ತಯಾರಿ ಮಾಡುವಂತೆ ಸಂಬಂಧಿಕರು ಸೂಚನೆ ನೀಡಿದ್ದರು. ಅವರ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಮಂಗಳೂರು ಆಸ್ಪತ್ರೆಯಿಂದ ಮೃತದೇಹ ಕೊಂಡೊಯ್ಯುತ್ತಿದ್ದ ಮಾರ್ಗಮಧ್ಯೆ ಉಪ್ಪಳ ತಲುಪುತ್ತಿದ್ದಂತೆ ಗುರುವ ಅವರ ದೇಹದಲ್ಲಿ ಚಲನೆ ಕಂಡುಬಂದಿದೆ. ಉಸಿರಾಟ ಆರಂಭವಾಗಿದೆ. ತಕ್ಷಣವೇ ರೋಗಿಯನ್ನು ಬದಿಯಡ್ಕದ ಕ್ಲಿನಿಕ್ಕಿಗೆ ಕರೆದೊಯ್ದಿದ್ದಾರೆ. ತಪಾಸಣೆ ಮಾಡಿದ ವೈದ್ಯರು ಅವರು ಜೀವಂತವಾಗಿದ್ದಾರೆ ಎಂದು ತಿಳಿಸಿದ್ದಾರೆ. ಬಳಿಕ ಕಾಸರಗೋಡಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು